ರಾಜ್ಯ

ಮದ್ಯಕ್ಕೆ ಲೈಸನ್ಸ್‌ | 25 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾ ಬಲೆಗೆ ಅಬಕಾರಿ ಡಿಸಿ

ಬೆಂಗಳೂರು : ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದ ಅಬಕಾರಿ ಉಪ ಆಯುಕ್ತ (ಡಿಸಿ)ರನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಮೈಕ್ರೋ ಬ್ರಿವೇರಿ, ಸಿಎಲ್ 7 ಲೈಸನ್ಸ್ ಗೆ 80 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಜಗದೀಶ್, ಮೊದಲ ಕಂತಿನ ಹಣವಾಗಿ 25 ಲಕ್ಷ ರೂ. ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವೇಳೆ ಅಬಕಾರಿ ಅಧಿಕ್ಷಕ ತಮ್ಮಣ್ಣ, ಮಧ್ಯವರ್ತಿ ಹಾಗೂ ಅಬಕಾರಿ ಇಲಾಖೆಯ ಕಾನ್‌ಸ್ಟೇಬಲ್ ಲಕ್ಕಪ್ಪ ಎಂಬವರನ್ನೂ ಬಂಧಿಸಲಾಗಿದೆ.

ದೂರುದಾರ ಲಕ್ಷ್ಮೀನಾರಾಯಣ ನೀಡಿದ ಮಾಹಿತಿ ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನೂ ವಶಕ್ಕೆ ಪಡೆದಿದ್ದಾರೆ. ಲಕ್ಷ್ಮೀನಾರಾಯಣ ಅವರ ಪ್ರಕಾರ, ಮೈಕ್ರೋ ಬ್ರಿವರಿ ಮತ್ತು ಸಿಎಲ್ 7 ಪರವಾನಗಿಗಳಿಗಾಗಿ ಆರಂಭದಲ್ಲಿ 80 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ನಂತರ ಈ ಮೊತ್ತವನ್ನು 2.25 ಕೋಟಿ ರೂಪಾಯಿಗಳಿಗೆ ಹೆಚ್ಚಿಸಲಾಗಿತ್ತು. ಕೊನೆಗೆ 75 ಲಕ್ಷ ರೂಪಾಯಿಗೆ ಬಂದು ನಿಂತಿದ್ದು, ಮೊದಲ ಕಂತಿನ 25 ಲಕ್ಷ ರೂಪಾಯಿ ಹಣವನ್ನು ನೀಡುವಂತೆ ಒತ್ತಾಯಿಸಲಾಗಿತ್ತು. ಈ ಹಣವನ್ನು ಹೊಂದಿಸಲು ತಾನು ಸ್ನೇಹಿತರಿಂದ ಸಾಲ ಪಡೆದಿದ್ದೆ ಎಂದು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಿರತೆ ದಾಳಿಗೆ ಮೇಕೆ ಬಲಿ : ಗ್ರಾಮಸ್ಥರಲ್ಲಿ ಆತಂಕ

ಚಾಮರಾಜನಗರ : ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಡೆದಿದೆ. ಜಮೀನಿನಲ್ಲಿರುವ ಕೊಟ್ಟಿಗೆಯಲ್ಲಿ ಜಾನುವಾರುಗಳ ಜೊತೆಗೆ…

35 mins ago

ಮಹಿಳೆಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ 3 ವರ್ಷ ಕಠಿಣ ಸೆರೆವಾಸ

ಹನೂರು : ತಾಲೂಕಿನ ಕುರುಬರ ದೊಡ್ಡಿ ಗ್ರಾಮದ ಸರ್ಕಾರಿ ಹಿರಿಯ ಉರ್ದು ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಆಹಾರ…

47 mins ago

RCB ಅಭಿಮಾನಿಗಳಿಗೆ ಸಿಹಿಸುದ್ದಿ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಅನುಮತಿ

ಬೆಂಗಳೂರು : ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ…

1 hour ago

Womens IPL | ದಾಖಲೆ ಬರೆದ ಶ್ರೇಯಾಂಕಾ ಪಾಟೀಲ್‌

ಮುಂಬೈ : ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಆಲ್‌ರೌಂಡರ್ ಶ್ರೇಯಾಂಕಾ ಪಾಟೀಲ್ 5 ವಿಕೆಟ್…

1 hour ago

ನೀವೇನು ಮಾಡ್ತಿದ್ರಿ..? ಮೈಸೂರಲ್ಲಿ ಡ್ರಗ್ಸ್‌ ಪ್ಯಾಕ್ಟರಿ ಪತ್ತೆ ಪ್ರಕರಣದಲ್ಲಿ ರಾಜ್ಯ ಪೊಲೀಸರಿಗೆ ಸಿಎಂ ಪ್ರಶ್ನೆ

ಬೆಂಗಳೂರು : ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಡ್ರಗ್ಸ್‌ಗೆ ಕಡಿವಾಣ ಹಾಕಿ, ಮಾದಕ ವಸ್ತು…

2 hours ago

ಪ್ರಧಾನಿ ಮೋದಿಯಿಂದ ಮೌಢ್ಯ ಬಿತ್ತನೆ : ಸಚಿವ ಎಚ್.ಸಿ.ಮಹದೇವಪ್ಪ ಟೀಕೆ

ಮೈಸೂರು : ಸಾಮಾಜಿಕ ಬಹಿಷ್ಕಾರ, ಮಾರ್ಯಾದೆಗೇಡು ಹತ್ಯೆ ತಡೆಯಲು ವಿಶೇಷ ಕಾನೂನು ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ…

2 hours ago