ಬೆಂಗಳೂರು: ಹೊಸ ವರ್ಷಕ್ಕೆ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ ಬಂದಿದ್ದು, ನಿನ್ನೆ ಒಂದೇ ದಿನ ರಾಜ್ಯದಲ್ಲಿ 308 ಕೋಟಿ ಮದ್ಯ ಮಾರಾಟವಾಗಿದೆ.
ಡಿಸೆಂಬರ್.31ರ ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೇವಲ ಅರ್ಧ ದಿನದ ಅವಧಿಯಲ್ಲಿ ಬರೋಬ್ಬರಿ 308 ಕೋಟಿ ರೂ ಮದ್ಯ ಮಾರಾಟವಾಗಿದೆ. ಈ ಮೂಲಕ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ ಹರಿದು ಬಂದಿದೆ. 2024ರ ಡಿಸೆಂಬರ್.31ರಂದು 7305 ಮದ್ಯ ಮಾರಾಟಗಾರರು ಕೆಎಸ್‌ಬಿಸಿಎಲ್ ನಿಂದ ಮದ್ಯ ಖರೀದಿ ಮಾಡಿದ್ದಾರೆ.
ಇನ್ನು ಕಳೆದ 2023ರ ಡಿಸೆಂಬರ್.31ರಂದು 193 ಕೋಟಿ ಮದ್ಯ ಮಾರಾಟ ಆಗಿತ್ತು. ನಿನ್ನೆ ರಾಜ್ಯದಲ್ಲಿ ಭರ್ಜರಿ 308 ಕೋಟಿ ಮದ್ಯ ಮಾರಾಟವಾಗಿದೆ.
ಕರ್ನಾಟಕ ರಾಜ್ಯ ಸೇರಿದಂತೆ ದೇಶಾದ್ಯಂತ ಹೊಸ ವರ್ಷದ ಸಂಭ್ರಮಾಚರಣೆ ಮುಗಿಲುಮುಟ್ಟಿದೆ. 2024ಕ್ಕೆ ಗುಡ್‌ಬೈ ಹೇಳಿ 2025ನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ. ಎಲ್ಲೆಲ್ಲೂ ಯುವಕರು ಸೇರಿದಂತೆ ಎಲ್ಲಾ ವರ್ಗದ ಜನರು ಸಂಭ್ರಮಾಚರಣೆ ನಡೆಸಿದ್ದಾರೆ. ಬೆಂಗಳೂರಿನ ಪ್ರಮುಖ ರಸ್ತೆಗಳು ಯುವಕ ಯುವತಿಯರು ಮದ್ಯದ ಅಮಲಿಯಲ್ಲಿ ತೂರಾಡುತ್ತಿದ್ದರು. ಕೆಲವರಂತೂ ಕುಡಿದು ರಸ್ತೆಯಲ್ಲೇ ಟೈಟಾಗಿ ಬಿದ್ದಿದ್ದರು.
ಮಧ್ಯರಾತ್ರಿ 12 ಗಂಟೆಯಿಂದ ಬೆಳಿಗ್ಗೆಯವರೆಗೂ ಪ್ರಮುಖ ರಸ್ತೆಗಳು ಹಾಗೂ ಮನೆಗಳಲ್ಲೂ ಹೊಸ ವರ್ಷದ ಸಂಭ್ರಮ ಆಚರಿಸಿದ ಜನರು, ನೂತನ ವರ್ಷವನ್ನು ಅದ್ಧೂರಿಯಿಂದ ಬರಮಾಡಿಕೊಂಡಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…