ರಾಜ್ಯ

ಅಬಕಾರಿ ಇಲಾಖೆ | ವರ್ಗಾವಣೆಗೆ ಹೊಸ ನಿಯಮ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ  ಸಚಿವ ಆರ್ ಬಿ ತಿಮ್ಮಾಪೂರ  ತಿಳಿಸಿದ್ದಾರೆ.

ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಸಚಿವ ತಿಮ್ಮಾಪೂರ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ಅನುಮೋದನೆ ನೀಡಲಾಗಿದ್ದು, ಅನುಬಂಧದಲ್ಲಿ ನೀಡಲಾದ ಕರಡನ್ನು ಹೊರಡಿಸಿ, ಸಂಬಂಧಪಟ್ಟವರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸುವುದು. ಹಾಗೂ ಸ್ವೀಕೃತವಾಗಬಹುದಾದ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಿದ ನಂತರ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ನ್ನು ಅಂತಿಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ತಿಮ್ಮಾಪೂರ ಅವರು ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿನ ಹುದ್ದೆಗಳನ್ನು ಕಾರ್ಯ ನಿರ್ವಾಹಕ ಮತ್ತು ಕಾರ್ಯನಿರ್ವಾಹಕೇತರ ಎಂದು ವಿಂಗಡಿಸಿ, ಅಬಕಾರಿ ನಿರೀಕ್ಷಕರು, ಅಬಕಾರಿ ಉಪ ನಿರೀಕ್ಷಕರು, ಅಬಕಾರಿ‌ ಮುಖ್ಯ ಪೇದೆ ಮತ್ತು ಅಬಕಾರಿ ಪೇದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಒಬ್ಬ ಅಧಿಕಾರಿ/ಸಿಬ್ಬಂದಿಯನ್ನು ಸತತವಾಗಿ ಎರಡಕ್ಕಿಂತ ಹೆಚ್ಚು ಅವಧಿಗೆ ಕಾರ್ಯನಿರ್ವಾಹಕ ಹುದ್ದೆಗೆ ವರ್ಗಾಯಿಸುವಂತಿಲ್ಲ ಹಾಗೂ ಅಬಕಾರಿ ಅಧಿಕಾರಿಗಳ ಕಡ್ಡಾಯ ವರ್ಗಾವಣೆಗೆ ಹೊಸ ನಿಯಮದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಸಚಿವ ತಿಮ್ಮಾಪೂರ ತಿಳಿಸಿದ್ದಾರೆ.

ಕಳೆದ 05 ವರ್ಷಗಳಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಕಾರ್ಯನಿರ್ವಾಹಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ ಅಬಕಾರಿ ಜಂಟಿ ಆಯುಕ್ತರು, ಉಪ ಆಯುಕ್ತರು, ಅಧೀಕ್ಷಕರು, ನಿರೀಕ್ಷಕರು ಮತ್ತು ಉಪ ನಿರೀಕ್ಷಕರುಗಳನ್ನು ಸದರಿ ಜಿಲ್ಲೆಗಳನ್ನು ಹೊರತುಪಡಿಸಿ ಇತರೆ ಜಿಲ್ಲೆಗಳಿಗೆ ವರ್ಗಾಯಿಸಲು ಹೊಸ ನಿಯಮದಲ್ಲಿ ಉಲ್ಲೇಖಿಸಲಾಗಿದೆ.

ಅಬಕಾರಿ ಇಲಾಖೆಯು ಸಮವಸ್ತ್ರಾಧಾರಿತ ಮತ್ತು ನಿಯಂತ್ರಕ ಇಲಾಖೆ ಆಗಿರುವುದರಿಂದ ಹೊಸ ವರ್ಗಾವಣೆ ನಿಯಮ ಇಲಾಖೆಯಲ್ಲಿ ಜಾರಿ ಮತ್ತು ತನಿಖೆ ಕಾರ್ಯವನ್ನು ಪರಿಣಾಮಕಾರಿ ಕೈಗೊಳ್ಳಲು ಅನುಕೂಲವಾಗಲಿದೆ. ಜೊತೆಗೆ ಇಲಾಖೆಯಲ್ಲಿ ಪಾರದರ್ಶಕತೆ ವ್ಯವಸ್ಥೆ ಜಾರಿಯಾಗುವುದಿಂದ ಭ್ರಷ್ಟಾಚಾರಕ್ಕೆ ಆಸ್ಪದ ಸಿಗುವುದಿಲ್ಲ ಮತ್ತು ಸರ್ಕಾರಕ್ಕೆ ಆದಾಯ ಕೂಡ ಹೆಚ್ಚಾಗಲಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

58 mins ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

1 hour ago

ಶೀಘ್ರ 3600 ಸಿಬ್ಬಂದಿ ನೇಮಕಾತಿಗೆ ಅಧಿಸೂಚನೆ : ಪರಮೇಶ್ವರ್‌

ಬೆಳಗಾವಿ : ಶೀಘ್ರದಲ್ಲೇ 3600 ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್‌ಗೆ ತಿಳಿಸಿದ್ದಾರೆ. ಸದಸ್ಯ ಜಗದೇವ್…

1 hour ago

ಪ್ರತಿಭಟನೆ ವೇಳೆ ಮಹಿಳಾ ASIನ ಚಿನ್ನದ ಸರ ಎಗರಿಸಿದ ಖದೀಮರು

ಶಿವಮೊಗ್ಗ : ಬಿಜೆಪಿ ಪ್ರತಿಭಟನೆ ವೇಳೆ ಕರ್ತವ್ಯ ನಿರತ ಎಎಸ್‌ಐ ಕುತ್ತಿಗೆಯಲ್ಲಿದ್ದ 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು…

1 hour ago

ಸರ್ಕಾರಿ ಯೋಜನೆ ಜನರಿಗೆ ತಲುಪಲು ನೌಕರರ ಪಾತ್ರ ಹೆಚ್ಚು : ಜಿಲ್ಲಾಧಿಕಾರಿ

ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ…

1 hour ago

ಎಸ್‌.ಟಿ,ಎಸ್‌.ಟಿ ದೌರ್ಜನ್ಯ ಕಂಡುಬಂದರೆ ಸೂಕ್ತ ಕ್ರಮ : ಜಿಲ್ಲಾಧಿಕಾರಿ

ಮೈಸೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ಯಾವುದೇ ದೌರ್ಜನ್ಯ ಕಂಡುಬಂದರೆ ಕೂಡಲೇ ಎಫ್.ಐ.ಆರ್ ದಾಖಲಿಸಿ ಸೂಕ್ತ…

2 hours ago