Mysore
28
broken clouds

Social Media

ಬುಧವಾರ, 09 ಸೆಪ್ಟೆಂಬರ್ 2026
Light
Dark

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸ ಸೇರಿದಂತೆ ಬೆಂಗಳೂರು, ಬೆಳಗಾವಿ ಹಾಗೂ ಮಹಾರಾಷ್ಟ್ರದ ವಿವಿಧೆಡೆ ಒಟ್ಟು 15 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ವಿದೇಶದಲ್ಲಿ ಹಣ ಹೂಡಿಕೆ ಮಾಡಲು ಸತೀಶ್ ಜಾರಕಿಹೊಳಿ ಸಹಾಯ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, 18 ಅನಧಿಕೃತ ಬಾರ್ ಲೈಸೆನ್ಸ್‌ಗಳನ್ನು ನೀಡುವ ವಿಚಾರದಲ್ಲಿಯೂ ಅವರು ಸಹಕರಿಸಿದ್ದರು ಎಂಬ ಆರೋಪದ ಹಿನ್ನೆಲೆ ಈ ದಾಳಿ ನಡೆದಿದೆ ಎನ್ನಲಾಗಿದೆ.

ದಾಳಿ ನಡೆಸಿರುವ ಇಡಿ ಅಧಿಕಾರಿಗಳು ವಿವಿಧ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳು ಹಾಗೂ ಮಾಹಿತಿ ಸಂಗ್ರಹಿಸುವ ಕಾರ್ಯ ಮುಂದುವರಿದಿದೆ.

 

Tags:
error: Content is protected !!