ರಾಮನಗರ: ಭಾರಿ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವಿನ ನಗೆ ಬೀರುವ ಸಾಧ್ಯತೆ ಇದೆ ಎಂದು ಪಿ-ಮಾರ್ಕ್ ಚುನಾವಣೋತ್ತರ ಸಮೀಕ್ಷೆ ಭವಿಷ್ಯ ನುಡಿದಿದೆ.
ಕಾಂಗ್ರೆಸ್ ಅಭ್ಯರ್ಥಿ ಸಿ.ಪಿಯೋಗೇಶ್ವರ್ ಹಿನ್ನಡೆ ಅನುಭವಿಸಲಿದ್ದಾರೆಂದು ಸಮೀಕ್ಷೆ ತಿಳಿಸಿದೆ. ಚನ್ನಪಟ್ಟಣ ಗೆಲುವಿಗಾಗಿ ಎರಡೂ ಕಡೆಯಿಂದ ಭರ್ಜರಿ ಪ್ರಚಾರ ನಡೆದಿತ್ತು. ಪ್ರಚಾರದ ವೇಳೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿ ಸಚಿವ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದರು. ಇದು ಕಾಂಗ್ರೆಸ್ ಅಭ್ಯರ್ಥಿ ಹಿನ್ನಡೆಗೆ ಕಾರಣವಾಗಲಿದೆ ಎಂದೇ ವಿಶ್ಲೇಷಿಸಲಾಗಿತ್ತು.
ಸ್ವತಃ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿಯೋಗೇಶ್ವರ್ ಅವರು ಹತಾಶೆಯಿಂದ ಮಾತನಾಡಿದ್ದರು. ಜಮೀರ್ ಹೇಳಿಕೆಯಿಂದ ಡ್ಯಾಮೇಜ್ ಆಗಿರುವ ವಿಚಾರವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದರು.