ರಾಮನಗರ: ಭಾರಿ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವಿನ ನಗೆ ಬೀರುವ ಸಾಧ್ಯತೆ ಇದೆ ಎಂದು ಪಿ-ಮಾರ್ಕ್ ಚುನಾವಣೋತ್ತರ ಸಮೀಕ್ಷೆ ಭವಿಷ್ಯ ನುಡಿದಿದೆ.
ಕಾಂಗ್ರೆಸ್ ಅಭ್ಯರ್ಥಿ ಸಿ.ಪಿಯೋಗೇಶ್ವರ್ ಹಿನ್ನಡೆ ಅನುಭವಿಸಲಿದ್ದಾರೆಂದು ಸಮೀಕ್ಷೆ ತಿಳಿಸಿದೆ. ಚನ್ನಪಟ್ಟಣ ಗೆಲುವಿಗಾಗಿ ಎರಡೂ ಕಡೆಯಿಂದ ಭರ್ಜರಿ ಪ್ರಚಾರ ನಡೆದಿತ್ತು. ಪ್ರಚಾರದ ವೇಳೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿ ಸಚಿವ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದರು. ಇದು ಕಾಂಗ್ರೆಸ್ ಅಭ್ಯರ್ಥಿ ಹಿನ್ನಡೆಗೆ ಕಾರಣವಾಗಲಿದೆ ಎಂದೇ ವಿಶ್ಲೇಷಿಸಲಾಗಿತ್ತು.
ಸ್ವತಃ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿಯೋಗೇಶ್ವರ್ ಅವರು ಹತಾಶೆಯಿಂದ ಮಾತನಾಡಿದ್ದರು. ಜಮೀರ್ ಹೇಳಿಕೆಯಿಂದ ಡ್ಯಾಮೇಜ್ ಆಗಿರುವ ವಿಚಾರವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದರು.
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಾಜನಕವಾಗಿದೆ. ಯುದ್ಧದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ…
ಟೆಹರಾನ್: ಯುದ್ಧದ ಖರ್ಚು ನಿಭಾಯಿಸಲು ಸಂಚಾರ ಮಾಡುವ ವ್ಯಾಪಾರಿ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್ ನಿರ್ಧರಿಸಿದೆ. ಹಾರ್ಮುಜ್ ಜಲಸಂಧಿ ಮೂಲಕ…
ಚಾಮರಾಜನಗರ: ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿರುವ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ…
ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ವೇಳೆ ದೇಶದ ಮೇಲಾಗುವ ಪ್ರತಿಕೂಲ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರ ಸತತ ನಿಗಾ ವಹಿಸುತ್ತಿದ್ದು,…
ಸಾಲಿಗ್ರಾಮ: ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾರ್ಚ್.25ರಂದು ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ…
ಹೊಸದಿಲ್ಲಿ: ಭಾರತದ ಯೂರಿಯಾ ಘಟಕಗಳು ಅರ್ಧದಷ್ಟು ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೂಲಗಳು ಹೇಳಿವೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಹೊರ್ಮುಜ್…