ಬೆಂಗಳೂರು: ಜಾತಿ ಜನಗಣತಿ ವರದಿ ಜಾರಿ ಬಗ್ಗೆ ಪರ ವಿರೋಧಗಳು ಆಗಿಂದಲೂ ಮುನ್ನಲೆಗೆ ಬರುತ್ತಲೇ ಇವೆ. ಜಾತಿ ಜನಗಣತಿ ಮಾಡಿಸಿರುವ ರಾಜ್ಯ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲೂ ಪರ ವಿರೋಧಗಳು ಇವೆ. ಆದರೆ, ಇದೀಗ ಕಾಂಗ್ರೆಸ್‌ನ ಹಿರಿಯ ನಾಯಕ ಹರಿಪ್ರಸಾದ್ ಜಾತಿ ಜನಗಣತಿ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರು (ಅ.6) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ಬಿದ್ದರೆ ಬೀಳಲಿ. ಆದರೆ ಜಾತಿ ಜನಗಣತಿಯನ್ನು ಜಾರಿ ಮಾಡಲೇಬೇಕು ಎಂದು ಹೇಳಿದ್ದಾರೆ.
ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇದೆ. ಆದರೆ ಇದನ್ನು ಜಾರಿಗೆ ತರಲು ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸುವುದನ್ನು ಬಿಟ್ಟು ಈ ಕೂಡಲೇ ಜಾತಿಗಣತಿಯನ್ನು ಜಾರಿಗೆ ತರಲಿ ಎಂದು ಬಿ.ಕೆ ಹರಿಪ್ರಾಸಾದ್ ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ ಜಾತಿಗಣತಿ ಜಾರಿಗೆ ತರುವುದರಿಂದ ಎಲ್ಲಾ ಸಮುದಾಯಗಳಿಗೆ ಅನುಕೂಲವಾಗಲಿದೆ. ಜಾತಿಗಣತಿ ಜಾರಿಯಿಂದಲೇ ಸರ್ಕಾರ ಉರುಳುತ್ತದೆ ಎನ್ನುವುದಾದರೆ ಸರ್ಕಾರ ಬೀಳಲಿ ಬಿಡಿ ಎಂದಿದ್ದಾರೆ.
ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪ್ರಣಾಳಿಕೆ ಬಗ್ಗೆ ಗೌರವ ಇದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜಾತಿಗಣತಿ ಜಾರಿ ಬಗ್ಗೆ ಉಲ್ಲೇಖಿಸಲಾಗಿದೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಹ ಇದರ ಬಗ್ಗೆ ಪ್ರಸ್ಥಾಪಿಸಿ, ಜಾತಿ ಜನಗಣತಿ ಜಾರಿಯ ಪರವಿದ್ದಾರೆ ಎಂದರು.
ಚುನಾವಣೆ ಪ್ರಚಾರದ ವೇಳೆ ರಾಹುಲ್ ಅವರು ಪ್ರಪಂಚವೇ ಬಿದ್ದುಹೋದರೂ ಜಾತಿಗಣತಿ ಜಾರಿಯಾಗಬೇಕು ಎಂದೇ ಹೇಳಿದ್ದಾರೆ. ಹೀಗಾಗಿ ಪ್ರಪಂಚ ತಲೆ ಕೆಳಗಾದರು ಜಾತಿ ಜನಗಣತಿ ಜಾರಿಗೆ ತರಬೇಕು. ಸರ್ಕಾರ ಬಿದ್ದರೆ ಯಾಕೆ ಹೆದರಬೇಕು ಎಂದು ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…