ರಾಜ್ಯ

ಕಾಂಗ್ರೆಸ್‌ ಸರ್ಕಾರ ಪತನದ ಬಗ್ಗೆ ವಿ.ಸೋಮಣ್ಣ ಸ್ಪೋಟಕ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಹೆಚ್ಚು ದಿನ ಉಳಿಯಲ್ಲ. ಇನ್ನೂ 6 ತಿಂಗಳು ನಡೆಯುತ್ತೋ ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಎಚ್.ಡಿ ಕುಮಾರಸ್ವಾಮಿ ಸಾಹೇಬರಿಗೆ ತಿಳಿದಿರಬಹುದು ಅವರೇ ಹೇಳಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು(ಜೂ. 23) ನಡೆದ ರಾಜ್ಯ ಬಿಜೆಪಿಯಿಂದ ಬಿಜೆಪಿ-ಜೆಡಿಎಸ್‌ ಸಂಸದರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಬಿಜೆಪಿ-ಜೆಡಿಎಸ್‌ ಒಂದಾಗುವ ಬಹುಕಾಲ ನನಸಾಗಿದೆ. ಇದು ಕಾಂಗ್ರೆಸ್‌ನ ನಿದ್ರೆಗೆಡಿಸಿದೆ. ನಾವೆಲ್ಲಾ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಮೋದಿ ಅವರನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ರಾಜ್ಯದಲ್ಲಿ  ಬಿಜೆಪಿ ಸರ್ಕಾರ ಇದ್ದಾಗ ಪೆಟ್ರೋಲ್‌ ಬೆಲೆ 1 ರೂ ಜಾಸ್ತಿಯಾದಾಗ, ಕಾಂಗ್ರೆಸ್‌ ಹೇಗೆ ನಡೆದುಕೊಳ್ತು ಎಂದು ರಾಜ್ಯದ ಜನರಿಗೆ ತಿಳಿದಿದೆ. ಆದರೆ ಇದೀಗ ಕಾಂಗ್ರೆಸ್‌ ಅಧಿಕಾರದಲ್ಲಿದ್ದು ತೈಲ ಬೆಲೆಯನ್ನು 3 ರೂ.ಗಳನ್ನು ಹೆಚ್ಚಿಸಿದೆ. ಈ ವಂಚನೆಯನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ 18 ಸೀಟು ಬರುತ್ತೆ ಎಂದು ಜಂಭದ ಮಾತುಗಳನ್ನು ಆಡುತ್ತಿದ್ದರು. ಆ ಜಂಭದ ಮಾತಿಗೆ ರಾಜ್ಯದ ಜನತೆ  ಬುದ್ದಿ ಕಲಿಸಿದ್ದಾರೆ. ಸೋಮಣ್ಣ ಸೋಲುತ್ತಾರೆ ಎಂದು ಅಪಪ್ರಚಾರ ಮಾಡಿದರು. ಆದರೆ ನಾನು ಗೆದ್ದಿದ್ದೇನೆ. ಈ ಗೆಲುವು ಬಿಜೆಪಿ ಜೆಡಿಎಸ್‌ ಕಾರ್ಯಕರ್ತರದ್ದು ಎಂದು ಹೇಳಿದರು.

 

 

 

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

9 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

15 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

16 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

17 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

23 hours ago