ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನ ಶಾಲೆಯೊಂದರ ಮುಂಭಾಗದಲ್ಲಿ ಭಾರಿ ಪ್ರಮಾಣದ ಸ್ಪೋಟಕಗಳು ಪತ್ತೆಯಾಗಿದೆ.
ಬೆಂಗಳೂರಿನ ಬೆಳ್ಳಂದೂರಿನ ಶಾಲೆಯಲ್ಲಿ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ಸ್ಫೋಟಕಗಳು ಪತ್ತೆಯಾಗಿದೆ.
ಶಾಲೆಯ ಮುಂಬಾಗದ ಖಾಲಿ ಜಾಗದಲ್ಲಿ ಸ್ಪೋಟಕ ಪತ್ತೆಯಾಗಿದ್ದು, ಆತಂಕ ಸೃಷ್ಟಿಯಾಗಿದೆ.
ಸದ್ಯ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.