ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಸರಾ ರಜಾ ಅವಧಿಯನ್ನು ವಿಸ್ತರಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ.20-09-2025ರಿಂದ 7-10-2025ರವರೆಗೆ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಿದೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಕಾರ್ಯದಲ್ಲಿ ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳ ಶಿಕ್ಷಕರುಗಳಿಗೆ ಅಕ್ಟೋಬರ್.7ರವರೆಗೂ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾಗಿರುತ್ತದೆ.
ಜಾತಿಗಣತಿ ಕಾರ್ಯದಲ್ಲಿನ ತಾಂತ್ರಿಕ ಸಮಸ್ಯೆಗಳಿಂದಾಗಿ ಗಣತಿ ಕಾರ್ಯ ಪೂರ್ಣಗೊಂಡಿರುವುದಿಲ್ಲ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಗಣತಿ ಕಾರ್ಯ ಅಕ್ಟೋಬರ್.5ರಿಂದ ಪ್ರಾರಂಭವಾಗಿದೆ.
ಆದ್ದರಿಂದ ಜಾತಿಗಣತಿ ಪೂರ್ಣಗೊಳ್ಳದೇ ಇರುವುದರಿಂದ ಶಾಲಾ ರಜಾ ಅವಧಿಯನ್ನು ಅಕ್ಟೋಬರ್.17ರವರೆಗೆ ವಿಸ್ತರಿಸುವಂತೆ ನಿರ್ದೇಶನ ನೀಡಲು ತಮ್ಮಲ್ಲಿ ಕೋರಿದೆ ಎಂದು ಮನವಿ ಮಾಡಿದ್ದಾರೆ.





