ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಂಬಳಿ ನೀಡುವಂತೆ ಜೈಲಾಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.
ಜೈಲಿನಲ್ಲಿ ವಿಪರೀತ ಚಳಿಯಿಂದ ನಿದ್ದೆ ಬರದೇ ಒದ್ದಾಡುತ್ತಿದ್ದೇನೆ. ನನಗೆ ಕಂಬಳಿ ಕೊಡಿ ಎಂದು ನಟ ದರ್ಶನ್ ಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಂಬಳಿ ನೀಡುವಂತೆ ಜೈಲಾಧಿಕಾರಿಗಳಿಗೆ ಕೋರ್ಟ್ ಸೂಚನೆ ನೀಡಿದೆ.
ಬೆಂಗಳೂರಿನ 75ನೇ ಸಿಸಿಎಚ್ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಟ ದರ್ಶನ್ ಹಾಜರಾಗಿದ್ದರು. ಚಳಿಯಿಂದ ನಿದ್ದೆ ಮಾಡಲು ಆಗುತ್ತಿಲ್ಲ. ನಮಗೆ ಕಂಬಳಿ ನೀಡಿ ಎಂದು ಮನವಿ ಮಾಡಿಕೊಂಡಿದ್ದರು. ಪದೇ ಪದೇ ಆದೇಶಿದ್ದರೂ ಹೀಗ್ಯಾಕೆ ಮಾಡುತ್ತಾರೆ ಎಂದ ಜಡ್ಜ್ ಕೂಡಲೇ ಕಂಬಳಿ ನೀಡುವಂತೆ ಜೈಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಇನ್ನು ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆಪ್ತ ಧನ್ವೀರ್ ವಿಚಾರಣೆಗೆ ಹಾಜರಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹೆಸರು ಹೇಳಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ವೈರಲ್ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಆಪ್ತ ಧನ್ವೀರ್ ವಿಚಾರಣೆಗೆ ಹಾಜರಾಗಿದ್ದರು.





