ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಬಿಸಿಲಿನ ತೀವ್ರತೆ ವಿಪರೀತವಾಗಿರಲಿದ್ದು, ಸಾರ್ವಜನಿಕರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಕರ್ನಾಟಕದಲ್ಲಿ ಮಾರ್ಚ್‍ನಿಂದ ಮೇ 2026ರವರೆಗೆ ತೀವ್ರ ಬೇಸಿಗೆಯ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ಮತ್ತು ಕನಿಷ್ಠ ತಾಪಮಾನ ದಾಖಲಾಗಲಿದ್ದು, ವಿಶೇಷವಾಗಿ ಉತ್ತರ ಒಳನಾಡು ಭಾಗಗಳಲ್ಲಿ ಬಿಸೆ ಅಲೆ(ಹೀಟ್‍ವೇವ್) ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ರೆಡ್ ಅಲರ್ಟ್ ಸೇರಿದಂತೆ ತೀವ್ರ ಎಚ್ಚರಿಕೆಗಳು ಜಾರಿಯಾಗಬಹುದು ಎಂದು ಐಎಂಡಿ ತಿಳಿಸಿದೆ.
ಮುಂಬರುವ ತಿಂಗಳುಗಳಲ್ಲಿ ತಾಪ ಇನ್ನಷ್ಟು ತೀವ್ರಗೊಳ್ಳಲಿದೆ. ಕರಾವಳಿ ಕರ್ನಾಟಕದಲ್ಲಿ ಶೇ.65ರಿಂದ ಶೇ.75ರಷ್ಟು ಹೆಚ್ಚಿರುವ ಸಾಧ್ಯತೆಯೊಂದಿಗೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ (ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಇತ್ಯಾದಿ) ತಾಪಮಾನ 43-45ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತಲೂ ಹೆಚ್ಚು ದಾಖಲಾಗಬಹುದು. ಬೆಂಗಳೂರು ಸೇರಿದಂತೆ ಇತರ ಭಾಗಗಳಲ್ಲಿ 39-40 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯ ಸಾಧ್ಯತೆ ಇದೆ.
ಹೀಟ್‍ವೇವ್ ಸ್ಪೆಲ್‍ಗಳು 3-6 ದಿನಗಳವರೆಗೆ ಇದ್ದು, ನಂತರ ಸ್ವಲ್ಪ ವಿರಾಮ ಸಿಗಬಹುದು. ಆದರೆ ಕನಿಷ್ಠ ತಾಪಮಾನವೂ (ರಾತ್ರಿ ತಾಪಮಾನ) ಸಾಮಾನ್ಯಕ್ಕಿಂತ ಹೆಚ್ಚಾಗಿ ಇರುವುದರಿಂದ ಬೇಸಿಗೆ ಇನ್ನಷ್ಟು ಕಠಿಣವಾಗಲಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್? ಆಸುಪಾಸಿನಲ್ಲಿದೆ. ಕಲಬುರಗಿ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಈಗಾಗಲೇ ವಾಡಿಕೆಗಿಂತ ಅಧಿಕವಾಗಿರುವುದು ವರದಿಯಾಗುತ್ತಿದೆ.
ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ ಸಾರ್ವಜನಿಕರು, ಅದರಲ್ಲೂ ಮಕ್ಕಳು ಹಾಗೂ ವಯಸ್ಸಾದವರು ತಮ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವುದು ಅತ್ಯಗತ್ಯ ಎಂದು ತಜ್ಞರು ಕಿವಿಮಾತು ಹೇಳಿದ್ದಾರೆ. ಬೇಸಿಗೆಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬಿಸಿಲಿನ ತೀವ್ರತೆ ಗರಿಷ್ಠ ಮಟ್ಟದಲ್ಲಿರುತ್ತದೆ. ಹೀಗಾಗಿ ಈ ಸಮಯದಲ್ಲಿ ಅನಗತ್ಯವಾಗಿ ಮನೆಯಿಂದ ಹೊರಬರುವುದನ್ನು ಆದಷ್ಟು ತಪ್ಪಿಸಿ.
ಯಾವಾಗಲೂ ತಂಪಾದ ಹವಾಮಾನಕ್ಕೆ ಹೆಸರಾದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಈ ವರ್ಷ ಬಿಸಿಲಿನ ತಾಪ ಗಣನೀಯವಾಗಿ ಹೆಚ್ಚಾಗುವ ಸಂಭವವಿದೆ. ನಗರದಲ್ಲಿ ಉಷ್ಣಾಂಶವು ಬರೋಬ್ಬರಿ 39 ಡಿಗ್ರಿ ಸೆಲ್ಸಿಯಸ್ ತಲುಪಬಹುದು ಎಂದು ಅಂದಾಜಿಸಲಾಗಿದೆ.
ಐಎಂಡಿ ಮುನ್ಸೂಚನೆಯಂತೆ ಈ ಬೇಸಿಗೆ ತೀವ್ರವಾಗಿರುವುದರಿಂದ ಮುಂಜಾಗ್ರತೆ ಅಗತ್ಯ. ಹವಾಮಾನ ಬದಲಾವಣೆಯಿಂದಾಗಿ ಈ ರೀತಿಯ ತೀವ್ರ ಶಾಖ ತರಂಗಗಳು ಹೆಚ್ಚಾಗುತ್ತಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…