ರಾಜ್ಯ

ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲಿ ವಿಪರೀತ ಬಿಸಿಲಿನ ತೀವ್ರತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಬೇಸಿಗೆ ಆರಂಭಕ್ಕೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ವಾಡಿಕೆಗಿಂತ ಅಧಿಕ ತಾಪಮಾನ ವರದಿಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಬಿಸಿಲಿನ ತೀವ್ರತೆ ವಿಪರೀತವಾಗಿರಲಿದ್ದು, ಸಾರ್ವಜನಿಕರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಕರ್ನಾಟಕದಲ್ಲಿ ಮಾರ್ಚ್‍ನಿಂದ ಮೇ 2026ರವರೆಗೆ ತೀವ್ರ ಬೇಸಿಗೆಯ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ಮತ್ತು ಕನಿಷ್ಠ ತಾಪಮಾನ ದಾಖಲಾಗಲಿದ್ದು, ವಿಶೇಷವಾಗಿ ಉತ್ತರ ಒಳನಾಡು ಭಾಗಗಳಲ್ಲಿ ಬಿಸೆ ಅಲೆ(ಹೀಟ್‍ವೇವ್) ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ರೆಡ್ ಅಲರ್ಟ್ ಸೇರಿದಂತೆ ತೀವ್ರ ಎಚ್ಚರಿಕೆಗಳು ಜಾರಿಯಾಗಬಹುದು ಎಂದು ಐಎಂಡಿ ತಿಳಿಸಿದೆ.

ಮುಂಬರುವ ತಿಂಗಳುಗಳಲ್ಲಿ ತಾಪ ಇನ್ನಷ್ಟು ತೀವ್ರಗೊಳ್ಳಲಿದೆ. ಕರಾವಳಿ ಕರ್ನಾಟಕದಲ್ಲಿ ಶೇ.65ರಿಂದ ಶೇ.75ರಷ್ಟು ಹೆಚ್ಚಿರುವ ಸಾಧ್ಯತೆಯೊಂದಿಗೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ (ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಇತ್ಯಾದಿ) ತಾಪಮಾನ 43-45ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತಲೂ ಹೆಚ್ಚು ದಾಖಲಾಗಬಹುದು. ಬೆಂಗಳೂರು ಸೇರಿದಂತೆ ಇತರ ಭಾಗಗಳಲ್ಲಿ 39-40 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯ ಸಾಧ್ಯತೆ ಇದೆ.

ಹೀಟ್‍ವೇವ್ ಸ್ಪೆಲ್‍ಗಳು 3-6 ದಿನಗಳವರೆಗೆ ಇದ್ದು, ನಂತರ ಸ್ವಲ್ಪ ವಿರಾಮ ಸಿಗಬಹುದು. ಆದರೆ ಕನಿಷ್ಠ ತಾಪಮಾನವೂ (ರಾತ್ರಿ ತಾಪಮಾನ) ಸಾಮಾನ್ಯಕ್ಕಿಂತ ಹೆಚ್ಚಾಗಿ ಇರುವುದರಿಂದ ಬೇಸಿಗೆ ಇನ್ನಷ್ಟು ಕಠಿಣವಾಗಲಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್? ಆಸುಪಾಸಿನಲ್ಲಿದೆ. ಕಲಬುರಗಿ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಈಗಾಗಲೇ ವಾಡಿಕೆಗಿಂತ ಅಧಿಕವಾಗಿರುವುದು ವರದಿಯಾಗುತ್ತಿದೆ.

ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ ಸಾರ್ವಜನಿಕರು, ಅದರಲ್ಲೂ ಮಕ್ಕಳು ಹಾಗೂ ವಯಸ್ಸಾದವರು ತಮ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವುದು ಅತ್ಯಗತ್ಯ ಎಂದು ತಜ್ಞರು ಕಿವಿಮಾತು ಹೇಳಿದ್ದಾರೆ. ಬೇಸಿಗೆಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬಿಸಿಲಿನ ತೀವ್ರತೆ ಗರಿಷ್ಠ ಮಟ್ಟದಲ್ಲಿರುತ್ತದೆ. ಹೀಗಾಗಿ ಈ ಸಮಯದಲ್ಲಿ ಅನಗತ್ಯವಾಗಿ ಮನೆಯಿಂದ ಹೊರಬರುವುದನ್ನು ಆದಷ್ಟು ತಪ್ಪಿಸಿ.
ಯಾವಾಗಲೂ ತಂಪಾದ ಹವಾಮಾನಕ್ಕೆ ಹೆಸರಾದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಈ ವರ್ಷ ಬಿಸಿಲಿನ ತಾಪ ಗಣನೀಯವಾಗಿ ಹೆಚ್ಚಾಗುವ ಸಂಭವವಿದೆ. ನಗರದಲ್ಲಿ ಉಷ್ಣಾಂಶವು ಬರೋಬ್ಬರಿ 39 ಡಿಗ್ರಿ ಸೆಲ್ಸಿಯಸ್ ತಲುಪಬಹುದು ಎಂದು ಅಂದಾಜಿಸಲಾಗಿದೆ.

ಐಎಂಡಿ ಮುನ್ಸೂಚನೆಯಂತೆ ಈ ಬೇಸಿಗೆ ತೀವ್ರವಾಗಿರುವುದರಿಂದ ಮುಂಜಾಗ್ರತೆ ಅಗತ್ಯ. ಹವಾಮಾನ ಬದಲಾವಣೆಯಿಂದಾಗಿ ಈ ರೀತಿಯ ತೀವ್ರ ಶಾಖ ತರಂಗಗಳು ಹೆಚ್ಚಾಗುತ್ತಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago