ಬೆಂಗಳೂರು: ನಕಲಿ ವೈದ್ಯರ ವಿರುದ್ಧ ಸರ್ಕಾರದಿಂದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸದನದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಅಂತಹ ವೈದ್ಯರ ವಿರುದ್ಧ ಸರ್ಕಾರದಿಂದ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ.
ವೈದ್ಯರ ವಿರುದ್ಧ ಕಠಿಣ ಕ್ರಮ ತೆತೆದುಕೊಂಡು, ನಕಲಿ ಕ್ಲಿನಿಕ್‌ಗಳನ್ನು ಸಹ ಮುಚ್ಚಲಾಗುವುದು. ಇದಲ್ಲದೇ ವೈದ್ಯರು ಕ್ಲಿನಿಕ್ ಮುಂದೆ ಗ್ರೀನ್ ಬೋರ್ಡ್ ಹಾಕೋದನ್ನು ಕಡ್ಡಾಯ ಮಾಡಲಾಗಿದೆ ಎಂದರು.
ಇನ್ನೂ ಔಷಧಿ ನೀಡುವ ಕ್ಲಿನಿಕ್‌ನವರು ಕೂಡ ನೀಲಿ ಬೋರ್ಡ್ ಹಾಕಲು ಖಡಕ್ ಸೂಚನೆ ನೀಡಲಾಗಿದೆ. ನಕಲಿ ವೈದ್ಯರಿಗೆ 3 ವರ್ಷ ಜೈಲು ಶಿಕ್ಷೆ ನೀಡಲಾಗುತ್ತದೆ. ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗಟ್ಟಲು ಮತ್ತಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದರು.
ರಾಜ್ಯದಲ್ಲಿ ನಕಲಿ ವೈದ್ಯರು ಗಲ್ಲಿ ಗಲ್ಲಿಯಲ್ಲಿಯಲ್ಲಿಯೂ ಇದ್ದು, ಜನರ ಜೀವನ ಜೊತೆ ಆಟ ಆಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ನಾವು ಸರ್ವೆ ನಡೆಸಿ ನಕಲಿ ಡಾಕ್ಟರ್‌ಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಉತ್ತಮ ವೈದ್ಯರು ಸಿಗುವ ರೀತಿ ಮಾಡುತ್ತೇವೆ ಎಂದು ಭರವಸೆ ನೀಡಿದರು.