ರಾಜ್ಯ

ನಕಲಿ ಅಂಕಪಟ್ಟಿ ಜಾಲ ಪತ್ತೆ ; ಮೂವರ ಬಂಧನ

ಬೆಂಗಳೂರು : ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ತತ್ಸಮಾನ ಎಂದು ನಮೂದಿಸಿ ನೀಡುತ್ತಿದ್ದ ನಕಲಿ ಅಂಕಪಟ್ಟಿ ಜಾಲವನ್ನು ಪತ್ತೆ ಹಚ್ಚಿರುವ ಸಿಸಿಬಿ ಪೊಲೀಸರು ಮೂವರು ವಂಚಕರನ್ನು ಬಂಧಿಸಿದ್ದಾರೆ.

ದಾರವಾಡದ ಪ್ರಶಾಂತ್ ಗುಂಡುಮಿ(41), ಬನಶಂಕರಿ ಮೂರನೇ ಹಂತ ಶ್ರೀನಿವಾಸ್ ನಗರದ ಮೊನಿಷ್(26) ಮತ್ತು ಗದಗ ಜಿಲ್ಲೆಯ ಲಕ್ಷ್ಮೀಶ್ವರ ಸಿಟಿ ರಾಜಶೇಖರ್ ಎಚ್. ಬಳ್ಳಾರಿ(41) ಬಂಧಿತ ಆರೋಪಿಗಳು.

ಹೆಚ್ಚಿನ ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ದೂರಶಿಕ್ಷಣದ ಮೂಲಕ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ನಮ ಅಕಾಡೆಮಿಯು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ ಎಂದು ನಂಬಿಸಿ, ಒಬ್ಬೊಬ್ಬರಿಂದಲೂ 5 ರಿಂದ 10 ಸಾವಿರ ರೂ. ಪಡೆದು, ಸುಮಾರು 350 ಕ್ಕೂ ಹೆಚ್ಚು ನಕಲಿ ಅಂಕಪಟ್ಟಿಗಳನ್ನು ಆರೋಪಿಗಳು ವಿತರಣೆ ಮಾಡುತ್ತಿದ್ದರು ಎಂಬುವುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಬನಶಂಕರಿಯಲ್ಲಿ ಅಕಾಡೆಮಿ ನಡೆಸುತ್ತಿದ್ದ ಮಾಲೀಕ ಹಾಗೂ ದಾರವಾಡ ಇಬ್ಬರು ವಂಚಕರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.
ಈ ನಕಲಿ ಅಂಕಪಟ್ಟಿಯನ್ನು ಸಾರಿಗೆ ಇಲಾಖೆ ಹಾಗೂ ಶಿಶು ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ನೀಡಿ ಕೆಲವರು ಉದ್ಯೋಗ ಪಡೆದುಕೊಂಡಿದ್ದಾರೆಂದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.

ಘಟನೆ ವಿವರ:

ಕತ್ರಿಗುಪ್ಪೆ ಮುಖ್ಯರಸ್ತೆಯ ರಾಮ್‍ರಾವ್ ಲೇಔಟ್‍ನಲ್ಲಿರುವ ಅಕಾಡೆಮಿಯೊಂದರ ಮಾಲೀಕರನ್ನು ಭೇಟಿ ಮಾಡಿ, ವ್ಯಕ್ತಿಯೊಬ್ಬರು ತಮ್ಮ ಅಣ್ಣನ ಮಗನನ್ನು ದೂರ ಶಿಕ್ಷಣದ ಮೂಲಕ ಪಿಯುಸಿಗೆ ದಾಖಲು ಮಾಡಿಸಿದ್ದಾರೆ.

ದಾಖಲಾದ ಕೆಲವೇ ದಿನಗಳಲ್ಲಿ ಈತನಿಗೆ ಯಾವುದೇ ಪರೀಕ್ಷೆಯನ್ನು ಬರೆಸದೆ ಕರ್ನಾಟಕ ರಾಜ್ಯ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಎಂಬ ಸಂಸ್ಥೆಯ ಹೆಸರಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ತತ್ಸಮಾನ ಎಂದು ನಮೂದಿಸಿ ಅಂಕಪಟ್ಟಿಯನ್ನು ನೀಡಿದ್ದು, ಅಂಕಪಟ್ಟಿಯನ್ನು ಅವರು ಪರಿಶೀಲನೆ ಮಾಡಿದಾಗ ನಕಲಿ ಅಂಕಪಟ್ಟಿ ಎಂದು ಗೊತ್ತಾಗಿದೆ.

ತಕ್ಷಣ ಅವರು ಸಿಸಿಬಿಯ ಆರ್ಥಿಕ ಅಪರಾಧ ದಳಕ್ಕೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಸಿಸಿಬಿ ಪೊಲೀಸರು ಬನಶಂಕರಿಯಲ್ಲಿರುವ ಅಕಾಡೆಮಿ ಮೇಲೆ ದಾಳಿ ನಡೆಸಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದಾರವಾಡ ಹಾಗೂ ಬೆಳಗಾವಿಯ ವ್ಯಕ್ತಿ ಹಾಗೂ ಇತರರೊಂದಿಗೆ ಸೇರಿಕೊಂಡು ಸಂಸ್ಥೆಯ ಹೆಸರಿನಲ್ಲಿ ಹಣ ಪಡೆದು, ಅಕಾಡೆಮಿ ವತಿಯಿಂದ ಕಳಿಸುವ ದಾಖಲಾತಿಗಳ ಆಧಾರದ ಮೇಲೆ 10 ಮತ್ತು 12ನೇ ತರಗತಿಯ ಅಂಕಪಟ್ಟಿಗಳನ್ನು ನೀಡುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಅಲ್ಲದೇ ಸುಮಾರು 25 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿ ಹೆಸರಿನಲ್ಲಿ ಅಂಕಪಟ್ಟಿಗಳನ್ನು ಕೊಡಿಸಿರುವುದಾಗಿ ಹೇಳಿದ್ದಾನೆ.

ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿ ಕಛೇರಿಯಲ್ಲಿದ್ದ ಶಿಕ್ಷಣ ಮಂಡಳಿಗೆ ಸೇರಿದ 1 ಅಸಲಿ ಪಿಯುಸಿ ಅಂಕಪಟ್ಟಿ, ಅಸಲಿ ಲೀವಿಂಗ್ ಸರ್ಟಿಪಿಕೇಟ್, ಅಸಲು ಪ್ರಾವಿಷನಲ್ ಮಾರ್ಕ್ ಸಕಾರ್ಡ್, ಅಸಲಿ ಹಾಲ್ ಟಿಕೆಟ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತನಿಖೆಯನ್ನು ಮುಂದುವರೆಸಿದ ಪೊಲೀಸರು ಧಾರವಾಡದ ಆರೋಪಿಯನ್ನು ಮೊಬೈಲ್ ಫೋನ್ ಸಮೇತ ಶ್ರೀನಗರದಿಂದ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ವಂಚನೆಯಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ.

ಅಲ್ಲದೇ ಆತನ ಮೊಬೈಲ್ ಪರಿಶೀಲಿಸಿದಾಗ ಕರ್ನಾಟಕ ರಾಜ್ಯ ಮಾಧ್ಯಮಿಕ ಮತ್ತು ಉನ್ನತ ಶಿಕ್ಷಣ ಮಂಡಳಿಯ ಹೆಸರಿನಲ್ಲಿ ಸುಮಾರು 300 ಕ್ಕೂ ಹೆಚ್ಚು ನಕಲಿ ಅಂಕಪಟ್ಟಿಗಳಿರುವುದು ಕಂಡು ಬಂದಿದೆ.

ಈ ಆರೋಪಿಯನ್ನು ಹೆಚ್ಚಿನ ವಿಚಾಣೆಗೊಳಪಡಿಸಿ, ಶ್ರೀನಗರದಲ್ಲಿರುವ ಕಚೇರಿಯನ್ನು ಪರಿಶೀಲಿಸಿದಾಗ, ಅಂಕಪಟ್ಟಿಗಳನ್ನು ಪಡೆದುಕೊಂಡಿದ್ದ ಹಲವಾರು ವಿದ್ಯಾರ್ಥಿಗಳ ಅಂಕಪಟ್ಟಿಗಳ ನೈಜತೆಯ ಪರಿಶೀಲನೆಗೆ ಪಡೆದುಕೊಂಡು, ವಿವಿಧ ಇಲಾಖೆಗಳಿಂದ (ಸಾರಿಗೆ ಇಲಾಖೆ, ಪಾಸ್‍ಪೋರ್ಟ್ ಇಲಾಖೆ, ಶಿಶು ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ) ಅಕಾಡೆಮಿಗೆ ವರದಿ ಕೇಳಿರುವ ಮತ್ತು ಅಕಾಡೆಮಿಯು ನೀಡಿರುವ ಅಂಕಪಟ್ಟಿಗಳ ನೈಜತೆಯ ಬಗ್ಗೆ ವರದಿ ನೀಡಿರುವ ಸುಮಾರು 50 ಕ್ಕೂ ಹೆಚ್ಚು ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಈತನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತನೂ ಸಹ ಈ ಆರೋಪಿಗಳೊಂದಿಗೆ ಸೇರಿಕೊಂಡು, ಕಮೀಷನ್ ಆಸೆಗಾಗಿ ಮಧ್ಯವರ್ತಿಗಳಿಂದ ಹೆಚ್ಚಿನ ಹಣ ಪಡೆದು ಅಂಕಪಟ್ಟಿಗಳನ್ನು ಕೊಡಿಸಿರುವುದು ತನಿಖೆಯಿಂದ ತಿಳಿದು ಬಂದಿದೆ.

ಆತನ ವಶದಲ್ಲಿದ್ದ ಮೊಬೈಲ್ ಫೋನ್‍ನನ್ನು ಪರಿಶೀಲಿಸಿದಾಗ 50 ಕ್ಕೂ ಹೆಚ್ಚು ನಕಲಿ ಅಂಕಪಟ್ಟಿಗಳಿರುವುದು ಕಂಡು ಬಂದಿರುತ್ತದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಬೆಳಗಾವಿ ಮೂಲದ ಆರೋಪಿಯು ತಲೆಮರೆಸಿಕೊಂಡಿದ್ದು, ಆತನ ಪತ್ತೆಕಾರ್ಯ ಮುಂದುವರಿದಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

16 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

16 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

17 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

18 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

18 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

24 hours ago