ಬೆಂಗಳೂರು : ನಕಲಿ ಮೈಸೂರು ಸ್ಯಾಂಡಲ್ ಸೋಪ್‌ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ತಯಾರಿಕಾ ಘಟಕ ಹೈದರಾಬಾದ್‌ನಲ್ಲಿ ಪತ್ತೆಯಾಗಿದ್ದು, ಸುಮಾರು 2 ಕೋಟಿ ರೂ. ಮೌಲ್ಯದ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.
ಹೈದರಾಬಾದ್‌ನಲ್ಲಿ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್‌ಗಳನ್ನು ಹೋಲುವ ನಕಲಿ ಸೋಪ್‌ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಪೊಲೀಸರು, ನಕಲಿ ಉತ್ಪನ್ನ, ಪ್ಯಾಕಿಂಗ್ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ ಹಲವು ಸಾಮಾಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವರ ಬಂಧಿಸಲಾಗಿದ್ದು, ಈ ಸಂಬಂಧ ಮಾಲಕಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಲದ ಮಾಹಿತಿ ನೀಡಿದ ಸಚಿವ ಎಂ.ಬಿ ಪಾಟೀಲ್: ಹೈದರಾಬಾದ್ ಮಾರುಕಟ್ಟೆಯಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ಪೂರೈಕೆಯಾಗುತ್ತಿರುವುದು ಕಂಡು ಬಂದ ಹಿನ್ನಲೆ ಅನಾಮಧೇಯ ಕರೆಯೊಂದು ಸಚಿವ ಎಂ.ಬಿ ಪಾಟೀಲ್ ಅವರಿಗೆ ಬಂದಿದೆ.
ಈ ಸಂಬಂಧ ಕಾರ್ಖಾನೆ ಎಂ.ಡಿ ಡಾ. ಪ್ರಶಾಂತ್ ಗೆ ನಿಗಾ ವಹಿಸಲು ಸೂಚಿಸಿದ್ದರು.
ಕಾರ್ಯಪ್ರವೃತ್ತರಾಗಿದ್ದ ಸಿಕಂದರಾಬಾದಿನಲ್ಲಿರುವ ಕೆಎಸ್ಡಿಎಲ್ ಅಧಿಕೃತ ಮಾರಾಟ ಕಚೇರಿ ಸಿಬ್ಬಂದಿ ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ ಸಾಬೂನು ಮಾರಾಟ ಕಂಡುಬಂದಿದೆ. ಸ್ವತಃ 1 ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ ಮೂಲ ಪತ್ತೆಗೆ ಕೆಎಸ್ಡಿಎಲ್ ಸಿಬ್ಬಂದಿ ಮುಂದಾಗಿದ್ದರು.
ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂ. ಬೆಲೆಯ ಸೋಪ್ ಖರೀದಿಗೆ ಕೆಎಸ್ಡಿಎಲ್ ಸಿಬ್ಬಂದಿ ಆರ್ಡರ್ ಕೊಟ್ಟಿದ್ದರು. ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ಉತ್ಪಾದನೆ ಮಾಡುತ್ತಿದ್ದ ಸ್ಥಳವನ್ನು ಪತ್ತೆ ಹಚ್ಚಿದ್ದಾರೆ.
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…
ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ…
‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…
ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…