ರಾಜ್ಯ

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು ಇದೀಗ ಎಸ್‌ಐಟಿ ತನಿಖೆಗೆ ನೀಡಿ ಆದೇಶ ಹೊರಡಿಸಿದೆ. ಐಪಿಎಸ್ ಹಿರಿಯ ಅಧಿಕಾರಿ ಸಿ ವಂಶಿಕೃಷ್ಣ ನೇತೃತ್ವದ ಎಸ್‌ಐಟಿಗೆ ಐಪಿಎಸ್ ಅಧಿಕಾರಿಗಳಾದ ಶಿವಪ್ರಕಾಶ್, ಲೋಕೇಶ್, ಸಹಾಯಕ ಔಷಧ ನಿಯಂತ್ರಕರಾದ ಮಂಜುನಾಥ್ ರೆಡ್ಡಿ, ನಮ್ರತಾ ಹಲ್ಲೂರು, ಔಷಧ ನಿರೀಕ್ಷಕ ನೇಹಾ ಮುರ್ಗಿ ಅವರನ್ನೊಳಗೊಡಿರುವ ತಂಡವನ್ನು ರಚಿಸಲಾಗಿದೆ.

ನಕಲಿ ಔಷಧ ಜಾಲ ಪತ್ತೆಯಾದ ದಿನವೇ ಆರೋಗ್ಯ ಸಚಿವ ಯುಟಿ ಖಾದರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಪ್ರಕರಣವನ್ನು ಎಸ್‌ಐಟಿಗೆ ನೀಡುವ ಬಗ್ಗೆ ಸುಳಿವು ನೀಡಿದ್ದರು. ನಕಲಿ ಔಷಧ ಜಾಲ ಪತ್ತೆ ಸಂಬಂಧಬಗೆದಷ್ಟೂ ಶಾಕಿಂಗ್ ವಿಚಾರಗಳು ಬಯಲಾಗುತ್ತಿವೆ. ಪ್ರತಿಷ್ಠಿತ ಎಂಎನ್‌ಸಿ ಬ್ರ್ಯಾಂಡ್‌ಗಳ ಹೆಸರಿನಲ್ಲಿ ಜೀವಕ್ಕೇ ಕಂಟಕ ತರುವ ನಕಲಿ ಇಂಜೆಕ್ಷನ್ ಹಾಗೂ ಮಾತ್ರೆಗಳನ್ನು ಪೂರೈಸುತ್ತಿದ್ದ ಈ ಅಂತಾರಾಜ್ಯ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದ್ದು, ಇದರ ಕಿಂಗ್ ಪಿನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕರ್ನಾಟಕದ ಡ್ರಗ್ ಎನ್‌ಫೋರ್ಸ್‌ಮೆಂಟ್ ವಿಂಗ್ ಆಗಸ್ಟ್ ೧೮ರಂದು ಬಿದದಿ ಸಮೀಪದ ನಂ.೩೪ ಕುರುಬರಹಳ್ಳಿ ಗ್ರಾಮದಲ್ಲಿ ಲೈಸೆನ್ಸ್ ಇಲ್ಲದ ಔಷಧ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ನಕಲಿ ಔಷಧಗಳು, ಬಲ್ಕ್ ಸ್ಟಾಕ್, ಪ್ಯಾಕೇಜಿಂಗ್ ಯಂತ್ರಗಳು, ಖಾಲಿ ವಯಲ್‌ಗಳು ಹಾಗೂ ನಕಲಿ ಲೇಬಲ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ವಸ್ತುಗಳ ಒಟ್ಟು ಅಂದಾಜು ಮೌಲ್ಯ ೫,೦೫,೪೯,೫೭೫ ರೂ. ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

9 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

9 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

9 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

10 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

10 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

10 hours ago