ರಾಜ್ಯ

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಭಾನು ಚಂದ್ರರೆಡ್ಡಿ ಹಾಗೂ ಸಾಜಿಯಾ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ಟೆಕ್ಕಿ ದಂಪತಿಗಳಾಗಿದ್ದಾರೆ.

ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಅನೇಕ ಬಾರಿ ಕಲಹಗಳಾಗಿತ್ತು. ಇಬ್ಬರೂ ಮಾನಸಿಕ ಒತ್ತಡ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ನಿನ್ನೆ ಪತ್ನಿ ಇಲ್ಲದಿರುವಾಗ ಪತಿ ಭಾನು ಚಂದ್ರರೆಡ್ಡಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಜಿಯಾ ಮನೆಗೆ ಬಂದು ಗಂಡನ ಹೆಣ ನೋಡಿ ಅಪಾರ್ಟ್‌ಮೆಂಟ್‌ ಮೇಲಿನಿಂದ ಹಾರಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕೊತ್ತನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

1 hour ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

3 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

4 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

7 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

7 hours ago