director prem
ಬೆಂಗಳೂರು: ಎಮ್ಮೆ ಕೊಡಿಸುವುದಾಗಿ ವ್ಯಕ್ತಿಯೋರ್ವ ಖ್ಯಾತ ನಿರ್ದೇಶಕ ಪ್ರೇಮ್‌ಗೆ 4.5 ಲಕ್ಷ ರೂ ವಂಚನೆ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ.
ಗುಜರಾತ್ ಮೂಲದ ವನರಾಜ್ ಭಾಯ್ ಎಂಬಾತನ ವಿರುದ್ಧ ಚಂದ್ರ ಲೇಔಟ್ ಪೊಲೀಸರು ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಪ್ರೇಮ್ ಅವರ ಮ್ಯಾನೇಜರ್, ನಟ ದಶಾಚರ ಚಂದ್ರು ದೂರು ನೀಡಿದ್ದಾರೆ.
ಪ್ರೇಮ್ ಅವರು ಹೈನುಗಾರಿಕೆ ಮಾಡಲು 2 ಎಮ್ಮೆ ಖರೀದಿಸಲು ಮುಂದಾಗಿದ್ದರು. ಈ ವೇಳೆ ವನರಾಜ್ ಪ್ರೇಮ್ ಸಂಪರ್ಕಕ್ಕೆ ಬಂದು ನಿಮಗೆ ಒಳ್ಳೆಯ ಎಮ್ಮೆ ಕೊಡಿಸುತ್ತೇನೆ ಎಂದು 4.5 ಲಕ್ಷ ರೂ ಹಣ ಪಡೆದಿದ್ದನು. ನಂತರ ವಾಟ್ಸಾಪ್ ಮೂಲಕ ಎಮ್ಮೆಯ ವಿಡಿಯೋ ಕೂಡ ಕಳುಹಿಸಿದ್ದಾನೆ.
ಕೊನೆಗೆ ಎಮ್ಮೆಯೂ ಇಲ್ಲ, ಕೊಟ್ಟ ಹಣವೂ ಇಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ವನರಾಜ್ ಎಸ್ಕೇಪ್ ಆಗಿದ್ದಾನೆ. ನಂತರ ತಾನು ಮೋಸ ಹೋದೆ ಎಂದು ಅರಿತ ಪ್ರೇಮ್ ದೂರು ದಾಖಲಿಸಿದ್ದಾರೆ. ತಾಯಿ ಭಾಗ್ಯಮ್ಮ ಅವರ ಹೆಸರಿನಲ್ಲಿ ಸ್ವಂತ ಡೈರಿ ಫಾರ್ಮ್ ನಿರ್ಮಿಸಲು ಪ್ರೇಮ್ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…