Mysore
29
clear sky

Social Media

ಗುರುವಾರ, 29 ಜನವರಿ 2026
Light
Dark

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಿಧಿವಶ

ಬೆಂಗಳೂರು: ಕನ್ನಡ ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಗಳಿಸಿದ್ದ ನಿರೂಪಕಿ ಅಪರ್ಣಾ ಅವರು ಕಳೆದ ಕೆಲ ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನದ ಸುದ್ದಿ ಕನ್ನಡ ಚಿತ್ರರಂಗಕ್ಕೆ ದೊಡ್ಡ ಆಘಾತ ತಂದಿದೆ. ಅಪರ್ಣಾ ಅವರು ಕಳೆದ ಹಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅಪರ್ಣಾ ವಿಧಿವಶರಾಗಿದ್ದಾರೆ.

ಅಪರ್ಣಾ 1989ರಲ್ಲಿ ನಿರೂಪಕಿಯಾಗಿ ಟೆಲಿವಿಷನ್‌ ಸೇರಿದರು. ಇವರು 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್‌ ಅವರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದವರು. ನಂತರ ಇನ್ಸ್‌ಪೆಕ್ಟರ್‌ ವಿಕ್ರಮ್‌ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು.

90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದವರು ಅಪರ್ಣಾ. ನಂತರ ರೇಡಿಯೋ ಜಾಕಿಯಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ. 1998 ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಮೂಡಲ ಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿದ್ರು. 2013ರಲ್ಲಿ ಬಿಗ್‌ಬಾಸ್‌ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015ರಲ್ಲಿ ಸೃಜನ್‌ ಲೋಕೇಶ್‌ ನೇತೃತ್ವದಲ್ಲಿ ಆರಂಭವಾದ ಮಜಾ ಟಾಕೀಸ್‌ ಕಾರ್ಯಕ್ರಮದಲ್ಲಿ ವರಲಕ್ಷ್ಮೀ ಪಾತ್ರ ಮಾಡಿದ್ದಾರೆ.

ಅಪರ್ಣಾ ಅವರ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಅಪರ್ಣಾ ಅವರ ನಿಧನಕ್ಕೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.

 

 

Tags:
error: Content is protected !!