Mysore
29
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿಯ ಆತ್ಮಹತ್ಯೆ?

ರಾಮನಗರ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಸ್ಥಿತಿಗೆ ಅಭಿಮಾನಿಯೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮಾಳೆದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬೈರೇಶ್‌ ಹೆಸರಿನ ದರ್ಶನ್‌ ಅಭಿಮಾನಿ ಮೋರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ತಮ್ಮ ಹೀರೋಗೆ ಈ ಸ್ಥಿತಿ ಬರಬಾರದಿತ್ತು ಎಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕಳೆದ ಎರಡು ಮೂರು ದಿನಗಳಿಂದ ಭೈರೇಶ್‌ ಅನ್ನ ನೀರು ಬಿಟ್ಟಿದ್ದ. ನಟ ದರ್ಶನ್‌ಗಾದ ಪರಿಸ್ಥಿತಿ ನೆನೆದು ತುಂಬಾ ಮರುಗಿದ್ದರು. ನಿತ್ರಾಣಗೊಂಡು ಮೋರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲಾತಾಣದಲ್ಲಿ ಚರ್ಚೆ ನಡೆಯುತ್ತಿದ್ದು, ನಿಜವಾಗಲೂ ನೋವಿನಲ್ಲಿಯೇ ಆತ ಮೃತಪಟ್ಟನೇ ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಬರಬೇಕಿದೆ.

 

 

 

 

Tags:
error: Content is protected !!