ರಾಜ್ಯ

ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿ.ಎಂ.ಸಿದ್ದರಾಮಯ್ಯ

ವಿಜ್ಞಾನ ಓದಿ ಕರ್ಮಸಿದ್ಧಾಂತ ನಂಬಿದರೆ, ಮೌಡ್ಯಕ್ಕೆ ಜೋತು ಬಿದ್ದರೆ ಅಂಥಾ ಶಿಕ್ಷಣ ನಿರರ್ತಕ: ಸಿಎಂ

ಬೆಂಗಳೂರು: ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ದೇಶದ ಎರಡನೇ ರಾಷ್ಟ್ರಾಧ್ಯಕ್ಷರಾಗಿದ್ದ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲಾ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾಕೃಷ್ಣನ್ ಅವರ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಬೇಕು ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವವರು ನಮ್ಮ ಶಿಕ್ಷಕರು. ಇದು ಶಿಕ್ಷಕರ ಮೂಲಭೂತ ಜವಾಬ್ದಾರಿ ಎಂದರು.

ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತಿ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ ಎಂದರು.

ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವಂತೆ ರೂಪಿಸುವುದೇ ಶಿಕ್ಷಕರ ಜವಾಬ್ದಾರಿ. ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡರೆ ಮಾತ್ರ ಅವರಿಗೆ ಸಮಾಜ ಅರ್ಥ ಆಗುತ್ತದೆ. ಸಮಾಜದ ಸಮಸ್ಯೆಗಳಿಗೆ ಪರಿಹಾರ ರೂಪಿಸುತ್ತಾರೆ ಎಂದರು.

ವಿಜ್ಞಾನ ಓದಿರುವ ವಿದ್ಯಾರ್ಥಿಗಳೂ ಮೌಡ್ಯಕ್ಕೆ ಜೋತು ಬೀಳುವುದು, ಜಾತಿ ತಾರತಮ್ಯ ಮಾಡುವುದಾದರೆ ಅವರಿಗೆ ಸಿಕ್ಕ ಶಿಕ್ಷಣಕ್ಕೆ ಅರ್ಥ ಇರುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳನ್ನು ವೈಚಾರಿಕವಾಗಿ ರೂಪಿಸುವ ಜವಾಬ್ದಾರಿ ಶಿಕ್ಷಣದ್ದಾಗಿದೆ ಎಂದರು.

ಎಲ್ಲರಿಗೂ ಶಿಕ್ಷಣ ದೊರಕದಂತೆ ತಡೆಯುತ್ತಿದ್ದ ಕಾಲ ಈಗ ಇಲ್ಲ. ಈಗ ಪ್ರತಿಯೊಬ್ಬರಿಗೂ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಕಡ್ಡಾಯ ಶಿಕ್ಷಣದ ಜೊತೆಗೆ ಅತ್ಯುತ್ತಮ ವ್ಯಕ್ತಿತ್ವಗಳನ್ನು ರೂಪಿಸುವ ರೂವಾರಿಗಳು ನಮ್ಮ ಶಿಕ್ಷಕರು ಎಂದು ಮೆಚ್ಚುಗೆ ಸೂಚಿಸಿದರು.

ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮಾನವೀಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಶಿಕ್ಷಕರಿಂದ, ಶಿಕ್ಷಣದಿಂದ ಮಾತ್ರ ಸಾಧ್ಯ. 800 ವರ್ಷಗಳ ಹಿಂದೆಯೇ ಕರ್ಮ ಸಿದ್ಧಾಂತವನ್ನು ಬಸವಾದಿ ಶರಣರು ತಿರಸ್ಕರಿಸಿದ್ದರು. ಆದರೂ ಇವತ್ತಿನ ಶಿಕ್ಷಕರೂ ಹಣೆಬರಹ ಮುಂತಾದ ಕರ್ಮಸಿದ್ಧಾಂತವನ್ನು ನಂಬುತ್ತಾರೆ. ಇದು ಸರಿಯಲ್ಲ ಎಂದು ಹೇಳಿದರು.

ಸಾವಿತ್ರಿ ಬಾಯಿ ಫುಲೆ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಲಿ ಎಂದು ಹಾರೈಸುತ್ತೇನೆ ಎಂದರು.

ಶಿಕ್ಷಕರ ಸಮಸ್ಯೆಗಳನ್ನು ಶಿಕ್ಷಕರ ಸಂಘದ ಜೊತೆ ಸೇರಿ ಸುದೀರ್ಘವಾಗಿ ಚರ್ಚಿಸಿದ್ದೇನೆ. ಪದವಿಪೂರ್ವ ಶಿಕ್ಷಕರ ಸಮಸ್ಯೆಗಳು ಅರ್ಥವಾಗಿದೆ. ಇವುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಪ್ರಾಥಮಿಕ‌ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು, ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು, ಶಿಕ್ಷಕರ‌ ಮತ್ತು ಉಪನ್ಯಾಸಕರ ಸಂಘಟನೆಗಳ ಪದಾಧಿಕಾತಿಗಳು ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕುವೈತ್‌ ಭೇಟಿ: ಅರೇಬಿಯನ್‌ ಗಲ್ಫ್‌ ಕಪ್‌ ಉದ್ಘಾಟನೆಯಲ್ಲಿ ಭಾಗಿಯಾದ ಪ್ರಧಾನಿ ಮೋದಿ

ಕುವೈತ್‌/ನವದೆಹಲಿ: 26ನೇ ಅರೇಬಿಯನ್‌ ಗಲ್ಫ್‌ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್‌ ದೊರೆ ಶೇಖ್‌ ಮಿಶಾಲ್‌…

6 mins ago

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ: ಸಿಎಂ ಸಿದ್ದರಾಮಯ್ಯ

371 J ಕೊಡುಗೆಯಾಗಿ 371 ಬೆಡ್ ಗಳ ಆಸ್ಪತ್ರೆ: ಸಿಎಂ ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ…

6 mins ago

ಬಿಜೆಪಿಗೆ ಆತಂಕ ತಂದ ಶಾ ಅಂತರಾಳದ ಮಾತು

‘ಅಂಬೇಡ್ಕರ್ ಅಂಬೇಡ್ಕರ್ ಎನ್ನುವುದು ಈಗ ಒಂದು ಫ್ಯಾಶನ್ ಆಗಿಬಿಟ್ಟಿದೆ. ಹೀಗೆ ಹೇಳುವವರು ಭಗವಂತನ ಹೆಸರನ್ನಾದರೂ ಇಷ್ಟು ಬಾರಿ ಸ್ಮರಿಸಿದ್ದರೆ ಅವರಿಗೆ…

18 mins ago

ವೈಜ್ಞಾನಿಕ ಕಸ ವಿಲೇವಾರಿಗೆ ಜಾಗದ ಸಮಸ್ಯೆ

ರಸ್ತೆ ಬದಿಯೇ ಕಸದ ವಾಹನ ನಿಲುಗಡೆಗೊಳಿಸಬೇಕಾದ ಪರಿಸ್ಥಿತಿ; ದುರ್ವಾಸನೆಯಿಂದ ಸಾರ್ವಜನಿಕರಿಕೆ ಕಿರಿಕಿರಿ ಕೃಷ್ಣ ಸಿದ್ದಾಪುರ ಸಿದ್ದಾಪುರ: ಪಟ್ಟಣದಲ್ಲಿ ಕಸ ವಿಲೇವಾರಿ…

29 mins ago

ಹೈಟೆಕ್‌ ಬಸ್‌ ನಿಲ್ದಾಣದಲ್ಲಿ ಹಲವು ಸಮಸ್ಯೆಗಳು

ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…

54 mins ago

ಮರ ಕಡಿಯದೆಯೇ ಕಾಗದ ತಯಾರಿಸುವ ಪೇಪರ್‌ ಪವಾರ್‌

ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…

1 hour ago