ಬೆಂಗಳೂರು : ದೇವನಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಕೈಗಾರಿಕೆಗಾಗಿ ನಡೆದಿರುವ ಭೂಸ್ವಾಧೀನವನ್ನು ಕೈಬಿಡುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಮುತ್ತಿಗೆ ಹಾಕಿದರು.
ಬಹುಭಾಷಾ ನಟ ಪ್ರಕಾಶ್ ರೈ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಗಾಂಧಿ ಭವನದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯವರೆಗೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಪ್ರಗತಿಪರ ಸಂಘಟನೆಗಳ ನಾಯಕರನ್ನು ಕುಮಾರಕೃಪ ಅತಿಥಿಗೃಹದ ಬಳಿ ಪೊಲೀಸರು ತಡೆದರು.
ಬಳಿಕ ಪ್ರಕಾಶ್ ರೈ ನೇತೃತ್ವದಲ್ಲಿ ನಿಯೋಗವೊಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಭೂಸ್ವಾಽನದ ಪ್ರಕ್ರಿಯೆಯನ್ನು ಕೈಬಿಡುವಂತೆ ಒತ್ತಾಯಿಸಿದೆ.
ದೇವನಹಳ್ಳಿ ಹಾಗೂ ಸುತ್ತಮುತ್ತಲೂ ಫಲವತ್ತಾದ ಜಮೀನಿದ್ದು, ಅದನ್ನು ಕೈಗಾರಿಕೆಗಳಿಗೆ ಸ್ವಾಽನಪಡಿಸಿಕೊಳ್ಳುವುದು ಸರಿಯಲ್ಲ. ರೈತರು ಭೂಮಿ ಕಳೆದುಕೊಳ್ಳಲು ಸಿದ್ಧರಿಲ್ಲ ಎಂದು ನಿಯೋಗ ಮುಖ್ಯಮಂತ್ರಿಯವರ ಗಮನಕ್ಕೆ ತಂದಿದೆ. ಈ ಬಗ್ಗೆ ಪರಿಶೀಲಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.
ಜು.೪ರಂದು ಸಭೆ
ಜುಲೈ ೪ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇವನಹಳ್ಳಿ ಚನ್ನರಾಯಪಟ್ಟಣ ರೈತ ಹೋರಾಟಗಾರರು ಮತ್ತು ಸಂಯುಕ್ತ ಹೋರಾಟ ವೇದಿಕೆ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಗುರುವಾರ ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ರೈತ ಮುಖಂಡರ ಜೊತೆ ಈ ಬಗ್ಗೆ ಚರ್ಚಿಸಿದ ಮುಖ್ಯಮಂತ್ರಿಗಳು ಜುಲೈ ೪ರ ಬೆಳಗ್ಗೆ ೧೧ ಗಂಟೆಗೆ ರೈತರ ಬೇಡಿಕೆ ಮತ್ತು ಸಮಸ್ಯೆ ಕುರಿತಾಗಿ ಸಮಗ್ರ ಸಭೆ ನಡೆಸುವುದಾಗಿ ತಿಳಿಸಿದರು.





