ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದ ಹಾನಿಯಾದ ಬೆಳೆ ಹಾನಿ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಅತೀ ಮಳೆಯಿಂದ ಎಷ್ಟು ಹೆಕ್ಟೇರ್ ಪ್ರದೇಶ ಹಾನಿಯಾಗಿದೆ ಎಂಬುದನ್ನು ಅಂದಾಜಿಸಲಾಗಿದೆ. ಹಾನಿಯಾಗಿರುವ ಬಗ್ಗೆ ಸರ್ವೆಯನ್ನು ಸಹ ಮಾಡಲಾಗಿದೆ. ಭಾರೀ ಮಳೆ ಹಾನಿಯಿಂದ ಹಾನಿಯಾದ ಎಲ್ಲಾ ರೈತರ ಖಾತೆಗಳಿಗೂ ನೇರವಾಗಿ ಹಣ ಪಾವತಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಸಚಿವ ಕೃಷ್ಣಭೈರೇಗೌಡ ಅವರು, 39 ಲಕ್ಷ ರೈತರಿಗೆ 3500 ಕೋಟಿ ರೂ ಬೆಳೆ ಹಾನಿ ಪರಿಹಾರ ನೀಡಲಾಗುತ್ತದೆ. ಯಾವ ರೈತರು ಕೂಡ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರ ಖಾತೆಗೂ ಸದ್ಯದಲ್ಲೇ ಬೆಳೆ ಹಾನಿ ಪರಿಹಾರ ಬರುತ್ತದೆ ಎಂದು ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರ ನಮಗೆ ನಯಾ ಪೈಸೆಗೂ ಬರ ಪರಿಹಾರ ಬಿಡುಗಡೆ ಮಾಡುತ್ತಿರಲಿಲ್ಲ. ಆದ್ದರಿಂದ ನಾವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಹಾಕಿದ್ದೆವು. ಸುಪ್ರೀಂ ಕೋರ್ಟ್ ಸೂಚನೆ ನೀಡಿದ ಬಳಿಕವೇ ಕೇಂದ್ರ ಸರ್ಕಾರ ಬರ ಪರಿಹಾರ ನೀಡಿದೆ ಎಂದು ಕಿಡಿಕಾರಿದರು.
ಇನ್ನು ಸದ್ಯದಲ್ಲೇ ಬೆಳೆ ಹಾನಿ ಪರಿಹಾರ ರೈತರ ಖಾತೆಗಳಿಗೆ ಬರಲಿದೆ. ಯಾರೂ ಕೂಡ ಆತಂಕ ಪಡಬೇಡಿ. ನಮ್ಮ ಸರ್ಕಾರ ರೈತರ ಪರ ಇದೆ ಎಂದು ರೈತರಿಗೆ ಭರವಸೆ ನೀಡಿದರು.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾರ್ಚ್.10ರಂದು ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.6ರಂದು ಡಿ.ಕೆ.ಶಿವಕುಮಾರ್ ಕೆಪಿಸಿಸಿ…
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು…
ಶ್ರೀನಗರ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಣಿವೆಯಾದ್ಯಂತ ನಡೆದ ಬೃಹತ್ ಪ್ರತಿಭಟನೆಗಳ ನಂತರ ಕಾಶ್ಮೀರದಲ್ಲಿ…
ನವದೆಹಲಿ: ಇರಾನ್‍ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಳಿಕ ಕೇಂದ್ರ ಸರ್ಕಾರ ಮೌನವಾಗಿರುವುದಕ್ಕೆ ಕಾಂಗ್ರೆಸ್ ಸಂಸದೀಯ…
ಬೆಂಗಳೂರು: ಇರಾನ್ ಅಧ್ಯಕ್ಷ ಆಯಾತೊಲ್ಲಾ ಆಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ವಹಿಸುವ ಪರಿಸ್ಥಿತಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯಕ್ಕೆ ಕಾವೇರಿ ನದಿಯಿಂದ ಏತ ನೀರಾವರಿ…