Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸಿರಿಧಾನ್ಯ ಕೃಷಿಗೆ ರೈತರು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿ ಸುವರ್ಣಸೌಧದಲ್ಲಿ ಅಂತರಾಷ್ಟ್ರೀಯ ಸಾವಯುವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಿರಿಧಾನ್ಯ ಉತಾದನೆಯಲ್ಲಿ ದೇಶದಲ್ಲೇ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ಆದ್ದರಿಂದ ರೈತರು ಇದರ ಬೆಳವಣಿಗೆಯಲ್ಲಿ ಮುತುವರ್ಜಿವಹಿಸಬೇಕು ಎಂದರು.

ಇದೇ ಡಿಸೆಂಬರ್‌ 23, 24, 25, ರಂದು ಅಂತರಾಷ್ಟ್ರೀಯ ಸಾವಯುವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ನಡೆಯಲಿದೆ.

ಪ್ರಪಂಚದಾದ್ಯಂತ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ವಿಶ್ವದಲ್ಲಿ 903.61 ಲಕ್ಷ ಟನ್‌ಗಳಷ್ಟು ಬೆಳೆಯಲಾಗುತ್ತಿದೆ. ಭಾರತವು ವಿಶ್ವದಲ್ಲೇ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ಪಟ್ಟಗಳ ಸಾಲಿನಲ್ಲಿದೆ. ಸುಮಾರು 31.50 ರಷ್ಟು ಸಿರಿಧಾನ್ಯ ಭಾರತದಲ್ಲಿ ಬೆಳೆಯುತ್ತಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಸುಮಾರು 18.38 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ 22.16 ಲಕ್ಷಗಳಷ್ಟು ಸಿರಿಧಾನ್ಯ ಬೆಳೆಯಲಾಗುತ್ತದೆ. ಸಿರಿಧಾನ್ಯಗಳಲ್ಲಿ ಪ್ರೋಟಿನ್‌ ಹಾಗೂ ನಾರಿನಂಶ ಹೆಚ್ಚಾಗಿದ್ದು, ಮಾನವರಲ್ಲಿ ರೋಗ ನೀರೋಧಕ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಹಾಗೆಯೇ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯಗಳು ಸಹಕಾರಿಯಾಗಿವೆ ಎಂದು ಹೇಳಿದರು.

Tags: