ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೈ ಮೇಲೆ ಸಗಣಿ ಸುರಿದುಕೊಂಡು ವಿನೂತನವಾಗಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆದಿದ್ದು, ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಎತ್ತಿನ ಗಾಡಿಗಳ ಮೂಲಕ ಕನಕಪುರ ರೋಡ್ ನಿಂದ ಪಾದಯಾತ್ರೆ ಮೂಲಕ ಕೆಜಿ ರೋಡ್ ನಲ್ಲಿರುವ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಸಾವಿರಾರು ಅನ್ನದಾತರು ಮುಂದಾಗಿದ್ದರು. ಬಳಿಕ ಮೈ ಮೇಲೆ ಸಗಣಿ ಸುರಿದುಕೊಂಡು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಅಲ್ಲದೆ ಕೂಡಲೇ ನಮ್ಮೆಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.





