ಬೆಳಗಾವಿ : ಕಬ್ಬಿಗೆ ಸೂಕ್ತವಾದ ಬೆಲೆಯನ್ನು ನಿಗದಿ ಪಡಿಸಬೇಕೆಂದು ಒತ್ತಾಯಿಸಿ ರೈತರು ನಡೆಸುತ್ತಿದ್ದ ಹೋರಾಟ ಅಹಿಂಸ ರೂಪಕ್ಕೆ ತಿರುಗಿದ್ದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಸಂಗ ಜರುಗಿದೆ.
ಶುಕ್ರವಾರ ಬೆಳಗಾವಿ ಜಿಲ್ಲೆಯ ವಿವಿಧ ಕಡೆ ಕಬ್ಬು ಬೆಳೆಗಾರರು ತಮ್ಮ ಬಳಿಗೆ ಫ್ಆರ್‌ಪಿಎಫ್ ಪ್ರಕಾರ ಬಲೆ ನಿಗದಿಪಡಿಸಬೇಕೆಂದು ಒತ್ತಾಯಿಸಿ 9ನೇ ದಿನವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದರು.
ಉದ್ವಿಗ್ನಗೊಂಡ ಪ್ರತಿಭಟನಾಕಾರರ ಗುಂಪು, ಪೊಲೀಸರು, ಪೊಲೀಸ್ ವಾಹನಗಳ ಮೇಲೆಯೇ ಕಲ್ಲು ತೂರಾಟ ನಡೆಸಿದೆ. ಜಿಲ್ಲೆಯ ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟಿಸಿದರು. ಸರ್ಕಾರದ ನಿರ್ಧಾರ ಪ್ರಕಟಕ್ಕೂ ಮುನ್ನವೇ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದರು. ಹತ್ತರಗಿ ಟೋಲ್ ಬಳಿ ರೈತರು ಜಮಾವಣೆಗೊಂಡು ಪ್ರತಿಭಟಿಸುತ್ತಿದ್ದಾಗ ಘಟನೆ ನಡೆದಿದೆ. ಲೀಸ್ ವಾಹನಗಳ ಮೇಲೂ ಕಲ್ಲು ತೂರಿದರು. ಪರಿಸ್ಥಿತಿ ನಿಯಂತ್ರಿಸಲಾಗದೇ ಸ್ಥಳದಿಂದ ಪೊಲೀಸರು ಓಡಿದರು.
ಪ್ರತಿಭಟನೆ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ-4ರ ಹತ್ತರಗಿ ಟೋಲ್ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು. 250ಕ್ಕೂ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದರು. ಪ್ರತಿಭಟನೆ ಮಾಡುವ ರೈತರನ್ನು ವಶಕ್ಕೆ ಪಡೆಯಲು 5 ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು.
ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ, ಗುಲಬರ್ಗಾ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹೋರಾಟ ತೀವ್ರ ಸ್ವರೂಪ ಪಡೆದಿದೆ.ಬೆಳಗಾವಿಯ ಹತ್ತರಗಿ ಟೋಲ್ ಬಳಿ ಕಬ್ಬು ಬೆಳೆಗಾರರು ಹೋರಾಟ ತೀವ್ರಗೊಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಗಳನ್ನು ತಂದು ನಿಲ್ಲಿಸಿ ಪ್ರತಿಭಟನೆ ನಡೆಸಿದ್ದಾರೆ. ಏಕಾಏಕು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿ ದಿಢೀರ್ ಬಂದ್ ಆಗಿದ್ದ ಪರಿಣಾಮ ಸಾರ್ವಜನಿಕ ಬಸ್ ಗಳು, ವಾಹನ ಸಂಚಾರ ಬಂದ್ ಆಗಿದ್ದು, ಸಾಲು ಸಾಲಾಗಿ ವಾಹನಗಳು ರಸ್ತೆಯಲ್ಲಿಯೇ ನಿಂತಿವೆ. ಸರ್ಕಾರ ನಮ್ಮ ಸಂಕಷ್ಟಕ್ಕೆ ಸ್ಪಂದಿಸದಿದ್ದರೆ ಹೋರಾಟ ಇನ್ನೂ ತೀವ್ರಗೊಳ್ಳಲಿದೆ ಎಂದು ಪ್ರತಿಭಟನಾಕಾರ ರೈತರು ಎಚ್ಚರಿಸಿದ್ದಾರೆ.ರೈತರ ಹೋರಾಟಕ್ಕೆ ಆಟೋ ಸಂಘಟನೆ, ಮಾಜಿ ಸೈನಿಕರ ಸಂಘಟನೆ ಹಾಗೂ ಕನ್ನಡಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಇದನ್ನೂ ಓದಿ:-ಮೇಲುಕೋಟೆ | ಉಪರಾಷ್ಟ್ರಪತಿ ಭೇಟಿ ಹಿನ್ನೆಲೆ : ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಪರಿಶೀಲನೆ
ಈ ನಡುವೆ ಚಿಕ್ಕೋಡಿ ವಂದ್ ಗೆ ಕರೆಕೊಡಲಾಗಿದ್ದು, ಚಿಕ್ಕೋಡಿ ನಗರ ಭಾಗಶಃ ಬಂದ್ ಆಗಿದೆ. ಗೋಕಾಕ ನಗರದಲ್ಲಿ ಬಂದ್ ಗೆ ಕರೆ ಕೊಡಲಾಗಿತ್ತು, ಗೋಕಾಕ ಸಹ ಭಾಗಶಃ ಬಂದ್ ಆಗಿದೆ. ಚಿಕ್ಕೋಡಿ ಮತ್ತು ಗೋಕಾಕ ನಗರಗಳಲ್ಲಿ ವಕೀಲರು ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಚಿಕ್ಕೋಡಿ, ಗೋಕಾಕ, ರಾಯಭಾಗ, ಹತ್ತರಗಿ ಮತ್ತು ಬೆಳಗಾವಿ ನಗರದಲ್ಲಿ ರೈತರು ಮತ್ತು ಪೊಲೀಸರ ನಡುವೆ ಬಿರುಸಿನ ವಾಗ್ವಾದಗಳಾಗಿವೆ. ರಾಷ್ಟ್ರೀಯ ಹೆದ್ದಾರಿ 4 ತಡೆಹಿಡಿದಿದ್ದ ರೈತರನು ಮನವೊಲಿಸಲು ಬೆಳಗಾವಿ ಜಿಲ್ಲಾ ಪೊಲೀಸರು ವಿಫಲರಾಗಿದ್ದು, ಒಂದು ಬದಿ ಮಾತ್ರ ಸಂಚಾರಕ್ಜೆ ಅವಕಾಶ ಮಾಡಲಾಗಿತ್ತು.
ಗೋಕಾಕ್ ನ ನಗರದ ನಾಕಾ ನಂಬರ್ 1ರ ಬಳಿ ಪ್ರತಿಭಟನಾನಿರತ ರೈತರು ರಾಜ್ಯ ಹೆದ್ದಾರಿಯನ್ನು ತಡೆಯಲು ಯತ್ನಿಸಿದ್ದು, ಈ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ತೀವ್ರ ವಾಗ್ವಾದ ಉಂಟಾಯಿತು.
ರೈತರು ಹೆದ್ದಾರಿ ತಡೆಯಲು ಮುಂದಾದಾಗ, ಪೊಲೀಸರು ಅವರನ್ನು ತಡೆದರು. ರೈತರ ಮಾರ್ಗದಲ್ಲಿ ಪೊಲೀಸ್ ವ್ಯಾನ್ ನಿಲ್ಲಿಸಿದ್ದರಿಂದ ರೊಚ್ಚಿಗೆದ್ದ ರೈತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ತೀವ್ರಗೊಂಡು ಕೆಲ ರೈತರು ತಮ್ಮ ಆಗ್ರಹಕ್ಕೆ ನ್ಯಾಯ ಕೇಳುವ ಸಲುವಾಗಿ ನೆಲದ ಮೇಲೆ ಬಿದ್ದು ಪ್ರತಿಭಟಿಸಿದರು. ಪ್ರತಿ ಟನ್ ಕಬ್ಬಿಗೆ ?3,500 ದರ ನಿಗದಿ ಮಾಡಬೇಕೆಂದು ರೈತರು ಒತ್ತಾಯಿಸುತ್ತಿದ್ದು, ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ನಿರಂತರ ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ಪ್ರತಿಭಟನೆ ತೀವ್ರಗೊಳಿಸಿ ಹೆದ್ದಾರಿ ತಡೆಯಲು ಮುಂದಾಗಿದ್ದು, ಕೂಡಲೇ ಸರಕಾರ ಇತ್ತ ಗಮನಹರಿಸಬೇಕೆಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಪೊಲೀಸರು ಪರಿಸ್ಥಿತಿ ಕೈಮೀರದಂತೆ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ರೈತರನ್ನು ಸಮಾಧಾನಪಡಿಸುವ ಪ್ರಯತ್ನ ಮುಂದುವರಿಸಿದ್ದಾರೆ.
ಸರ್ಕಾರ ಇಂದು ಸಂಜೆ 5 ಗಂಟೆ ಒಳಗೆ ಪ್ರತಿ ಟನ್ ಕಬ್ಬಿಗೆ ಎಪ್ ಆರ್‍ಪಿ ಪ್ರಕಾರ 3,500 ಬೆಲೆ ನಿಗದಿಪಡಿಸಬೇಕೆಂದು ಒತ್ತಾಯಿಸಿದ್ದಾರೆ. ಅಲ್ಲದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಇದನ್ನು ಅಧಿಕೃತವಾಗಿ ಘೋಷಣೆ ಮಾಡಬೇಕೆಂಬುದು ರೈತರ ಬೇಡಿಕೆಯಾಗಿದೆ. ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ರೈತ ಮುಖಂಡರ ಜೊತೆ ಸಭೆ ನಡೆಸಿದ ಬಳಿಕ ಅಧಿಕೃತವಾಗಿ ಸರಕಾರದ ನಿಲುವನ್ನು ಪ್ರಕಟಿಸುವ ಲೆಕ್ಕಾಚಾರದಲ್ಲಿ ಸಿಎಂ ಇದ್ದರು. ಆದರೆ ರೈತ ಮುಖಂಡರು ಸಿಎಂ ಕರೆದಿದ್ದ ಸಭೆಯಿಂದ ದೂರ ಉಳಿದು ಅಧಿಕೃತ ಘೋಷಣೆಯಾಗುವವರೆಗೂ ನಾವು ಬರುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಬಾಗಲಕೋಟೆಯಲ್ಲಿ ರೈತರು ರಾಯಚೂರು ಹೈದರಾಬಾದ್‍ಗೆ ಸಂಪರ್ಕದಲ್ಲಿರುವ ರಾಷ್ಟ್ರೀಯ ಹೆದ್ದಾರಿಯನ್ನು ಬಂದು ಮಾಡಿದರು. ಈ ವೇಳೆ ಕೆಲವು ರೈತರು ರಸ್ತೆಯಲ್ಲಿ ಮಲಗಿ ವಿನೂತನವಾಗಿ ಪ್ರತಿಭಟನೆ ನಡೆಸಿದರೆ, ಇನ್ನು ಕೆಲವು ಕಡೆ ವಾಹನಗಳ ಮೇಲೆ ಹತ್ತಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಬೆಳಗಾವಿ ಜಿಲ್ಲೆಯ ಗುರ್ಲಾಪುರ ಕ್ರಾಸ್‍ನಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ನಾವು ಯಾವುದೇ ಕಾರಣಕ್ಕೂ ಪ್ರತಿಭಟನೆಯನ್ನು ಕೈಬಿಡುವುದಿಲ್ಲ ಮುಖ್ಯಮಂತ್ರಿಗಳು 3,500 ರೂ. ಬೆಲೆ ನಿಗದಿ ಮಾಡಿ ಅಧಿಕೃತವಾಗಿ ಘೋಷಣೆ ಮಾಡುವವರೆಗೂ ಜಾಗ ಬಿಟ್ಟು ಕದಲುವುದಿಲ್ಲ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಎಂಬ ತಾರತಮ್ಯ ಬೇಡ. ಕೇಂದ್ರ ಸರ್ಕಾರ ಎಷ್ಟು ಘೋಷಣೆ ಮಾಡಿದೆಯೋ ಗೊತ್ತಿಲ್ಲ. ಆದರೆ ಸರ್ಕಾರ ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಲೆ ನಿಗದಿ ಮಾಡಬೇಕು. ಪ್ರತಿ ವರ್ಷವೂ ಕಬ್ಬು ಕಟಾವಿಗೆ ಬಂದಾಗ ನಾವು ಪ್ರತಿಭಟನೆ ನಡೆಸಿಯೇ ಖರೀದಿ ಮಾಡುವಂತೆ ಸರ್ಕಾರಕ್ಕೆ ಒತ್ತಡ ಹಾಕಬೇಕು ಕೇಂದ್ರದ ಮೇಲೆ ರಾಜ್ಯ ಸರ್ಕಾರ, ಸರ್ಕಾರದ ಮೇಲೆ ಕೇಂದ್ರವು ಗೂಬೆ ಕೂರಿಸುತ್ತದೆ ನಾವು ಯಾರನ್ನು ನಂಬಬೇಕು ಎಂದು ರೈತರು ಪ್ರಶ್ನಿಸುತ್ತಿದ್ದಾರೆ.
ಶುಕ್ರವಾರ ಸಂಜೆಯೊಳಗೆ ಮುಖ್ಯಮಂತ್ರಿ 3,500 ರೂ. ದರವನ್ನು ಘೋಷಿಸದಿದ್ದರೆ ಪ್ರತಿಭಟನೆ ಮತ್ತಷ್ಟು ಉಲ್ಬಣಗೊಳ್ಳುತ್ತದೆ ಎಂದು ಚೋನಪ್ಪ ಪೂಜಾರಿ ನೇತೃತ್ವದ ರೈತರು ಘೋಷಿಸಿದ್ದಾರೆ. ನಮ್ಮ ಬೇಡಿಕೆಯನ್ನು ಮತ್ತೆ ನಿರ್ಲಕ್ಷಿಸಿದರೆ, ಕರ್ನಾಟಕದಾದ್ಯಂತ ಲಕ್ಷಾಂತರ ರೈತರು ಬೆಳಗಾವಿಗೆ ಮೆರವಣಿಗೆ ನಡೆಸಲಿದ್ದಾರೆ. ಸರ್ಕಾರ ಟನ್‍ಗೆ 3,500 ರೂ. ಘೋಷಿಸಿದ ಕ್ಷಣದಿಂದಲೇ ನಾವು ಪ್ರತಿಭಟನೆಯನ್ನು ಕೊನೆಗೊಳಿಸಲು ಸಿದ್ಧರಿದ್ದೇವೆ. ಆದರೆ ಅದಕ್ಕೂ ಮೊದಲು ಸಾಧ್ಯವೇ ಇಲ್ಲ ಎಂದು ಪೂಜಾರಿ ಹೇಳಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…