Mysore
22
clear sky

Social Media

ಭಾನುವಾರ, 19 ಏಪ್ರಿಲ 2026
Light
Dark

ರೈತರ ಹೋರಾಟ: ಸಿಎಂ ಸಿದ್ದರಾಮಯ್ಯಗೆ 5 ಗಂಟೆವರೆಗೆ ಗಡುವು ನೀಡಿದ ವಿಜಯೇಂದ್ರ

Real Illegalities Happened Under Congress Leadership: BJP State President B.Y. Vijayendra

ಬೆಳಗಾವಿ: ಕಳೆದ ಆರು ದಿನಗಳಿಂದ ಕಬ್ಬು ಬೆಳೆಗಾರರು ರಸ್ತೆ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ನಾನು ಈ ಬೇಡಿಕೆಗೆ ಒಂದು ತಾರ್ಕಿಕ ಅಂತ್ಯ ಸಿಗುವವರೆಗೂ ಈ ಸ್ಥಳ ಬಿಟ್ಟು ಹೋಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಐದು ಗಂಟೆ ಒಳಗಾಗಿ ತೀರ್ಮಾನಕ್ಕೆ ಬರಬೇಕು. ಇಲ್ಲವಾದರೆ ನಾಳೆ ಕೂಡ ನಾನು ಈ ಹೋರಾಟದಲ್ಲಿ ಭಾಗವಹಿಸುತ್ತೇನೆ. ನಾಳೆ ನನ್ನ ಹುಟ್ಟುಹಬ್ಬ ಇದ್ದರೂ ನಿಮ್ಮ ಜೊತೆ ಇರುತ್ತೇನೆ ಎಂದು ರೈತರಿಗೆ ಭರವಸೆ ನೀಡಿದ್ದಾರೆ.

ಕಳೆದ ಆರು ದಿನಗಳಿಂದ ರೈತರು ಹೋರಾಟ ಮಾಡಿಕೊಂಡು ಬಂದಿದ್ದಾರೆ. ನಿಮ್ಮ ಹೋರಾಟದಲ್ಲಿ ನಾನು ಭಾಗವಹಿಸುತ್ತೇನೆ. ನಾನು ಯಾವುದೇ ಪಕ್ಷದ ಶಾಸಕನಾಗಿ ಇಲ್ಲಿ ಬಂದಿಲ್ಲ. ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರೈತರು. ರೈತರ ಸ್ವಾಭಿಮಾನಕ್ಕೆ ಬಂದರೆ ಯಾರೂ ಕೂಡ ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags:
error: Content is protected !!