ರಾಜ್ಯ

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಇಬ್ಬರು ಹಾಗೂ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಆರು ಮಂದಿ ಸೇರಿದಂತೆ ಒಟ್ಟು ಎಂಟು ಜನ ಮೃತಪಟ್ಟಿದ್ದಾರೆ.

ಇವರೆಲ್ಲ ಸಂಬಂಧಿಕರು
ಬುಧವಾರ ಸಂಜೆ ತರೀಕೆರೆ ತಾಲ್ಲೂಕಿನ ಉಡೆವಾ ಗ್ರಾಮದಿಂದ ಒಟ್ಟು ೨೩ ಜನರ ತಂಡ ಮಂತ್ರಾಲಯ ಯಾತ್ರೆಗಾಗಿ ಪ್ರವಾಸ ಹಮ್ಮಿಕೊಂಡಿತ್ತು. ಇವರು ಮೂಲತಃ ಕಾರ್ಮಿಕರಾಗಿದ್ದು, ಪರಸ್ಪರ ಸಂಬಂಧಿಕರಾಗಿದ್ದಾರೆ. ಪಿಕ್‌ಅಪ್ ವಾಹನದಲ್ಲಿ ರಾಯರ ದರ್ಶನಕ್ಕೆ ಎಂದು ಮಂತ್ರಾಲಯಕ್ಕೆ ತೆರಳುತ್ತಿದ್ದರು.

ಹಾರುಬೂದಿ ಸಾಗಿಸುತ್ತಿದ್ದ ಟ್ಯಾಂಕರ್ ಮತ್ತು ಪಿಕ್‌ಅಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ. ಈ ಅಪಘಾತದಲ್ಲಿ ತರೀಕೆರೆ ತಾಲ್ಲೂಕಿನ ಉದ್ದೇವಾ ಗ್ರಾಮದ ಪುಟ್ಟಮ್ಮ (೬೫) ಹಾಗೂ ಮೀನಾಕ್ಷಿ (೫೦), ಕಣನಾಯಕನ ಹಳ್ಳಿಯ ಕುಮಾರ (೫೦), ದೀಪಿಕಾ (೪೦), ಬೆಳ್ಳಿ (೫), ಬೇಲೂರು ತಾಲ್ಲೂಕಿನ ಚಟ್ಟನಹಳ್ಳಿ ಗ್ರಾಮದ ಸುನಿಲ್ (೪೦), ಯಶೋದಾ (೬೦), ಲೋಲಾಕ್ಷಿ (೫೦) ಮೃತಪಟ್ಟಿದ್ದಾರೆ.

ಮುಗಿಲು ಮುಟ್ಟಿದ ಆಕ್ರಂದನ – ಗ್ರಾಮದಲ್ಲಿ ನೀರವ ಮೌನ
ಯಾತ್ರೆಗೆ ಹೋಗಿ ರಾಯರ ದರ್ಶನ ಪಡೆದು ಖುಷಿಯಿಂದ ಮನೆಗೆ ಬರುತ್ತಾರೆ ಎಂದು ಕಾಯುತ್ತಿದ್ದ ಉಡೆವಾ ಗ್ರಾಮಸ್ಥರಿಗೆ ಈ ಸುದ್ದಿ ಅತೀವ ಆಘಾತ ತಂದಿದೆ. ಒಂದೇ ಕುಟುಂಬದ ಸದಸ್ಯರು ಮತ್ತು ಸಂಬಂಧಿಕರು ಮೃತಪಟ್ಟಿರುವುದರಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಉಳಿದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

 

 

ಆಂದೋಲನ ಡೆಸ್ಕ್

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

2 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

7 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

7 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

7 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

17 hours ago