Mysore
21
overcast clouds
Light
Dark

ನಟ ಚೇತನ್‌ ಚಂದ್ರ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ.

ಇಂದು(ಮೇ.12) ಅಮ್ಮಂದಿರ ದಿನವಾದ ಹಿನ್ನೆಲೆ ಚೇತನ್‌ ಚಂದ್ರ ದೇವಸ್ಥಾನಕ್ಕೆ ಹೋಗಿದ್ದರು. ದೇವಸ್ಥಾನದಿಂದ ಹಿಂದಿರುಗುವಾಗ ಕಗ್ಗಲಿಪುರದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಘಟನೆ ಬಗ್ಗೆ ಸ್ವತಃ ನಟ ಚೇತನ್ ಚಂದ್ರ ಅವರು ತಮ್ಮ ಸೋಷಿಯಲ್ ಮೀಡಿಯಾ ಇನ್‌ಸ್ಟಾಗ್ರಾಂ ಅಕೌಂಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಯಾರೋ ಕಿಡಿಗೇಡಿಗಳು ಬೈಕ್‌ನಲ್ಲಿ ಬಂದು ಅಡ್ಡ ಹಾಕಿ ದುಡ್ಡು ಕೇಳಿದರು. ಹಣ ಕೊಡೋದಿಲ್ಲ ಅಂತ ಹೇಳಿದ್ದಕ್ಕೆ ಗಲಾಟೆ ಮಾಡಿದರು. ಬಳಿಕ ಬೈಕ್‌ನಲ್ಲಿ ಚೇಸ್ ಮಾಡಿಕೊಂಡು ಬಂದು ಕಾರಿಗೆ ಬೈಕ್ ಅಡ್ಡಹಾಕಿ, ನನಗೆ ಮುಖಕ್ಕೆ ರಕ್ತ ಬರುವ ಹಾಗೆ ಹೊಡೆದಿದ್ದಾರೆ ಎಂದು ನಟ ಚೇತನ್ ಚಂದ್ರ. ತಮ್ಮ ಸೋಷಿಯಲ್ ಮೀಡಿಯಾ ಇನ್‌ಸ್ಟಾಗ್ರಾಂ ಅಕೌಂಟ್‌ನಲ್ಲಿ ಲೈವ್ ವೀಡಿಯೋ ಮಾಡಿ ನಡೆದ ಘಟನೆ ಬಗ್ಗೆ ಸವಿಸ್ತಾರವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.