Mysore
24
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ಚಾರ್ಮಾಂಡಿ ಘಾಟಿನಲ್ಲಿಯೂ ಭೂ ಕುಸಿತದ ಆತಂಕ ; ಕಟ್ಟೆಚ್ಚರ ಘೋಷಿಸಿದ ಜಿಲ್ಲಾಡಳಿತ

ಚಿಕ್ಕಮಗಳೂರು : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿನ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ ಕೆಲವೇ ದಿನಗಳಲ್ಲಿ ಇದೀಗ ಚಿಕ್ಕಮಗಳೂರು ಜಿಲ್ಲೆ ಮೂಡಿಗೆಡೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿಯೂ ಭೂಕುಸಿತದ ಆತಂಕ ಎದುರಾಗಿದೆ.

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿರುವ ಕಾರಣ ಚಾರ್ಮಾಡಿ ಘಾಟಿನಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, ಜಿಲ್ಲಾಡಳಿತ ಕಟ್ಟೆಚ್ಚರ ಘೋಷಿಸಿದೆ. ಮುನ್ನೆಚ್ಚರಿಕಾ ಕಾರ್ಯಕ್ರಮವಾಗಿ ಈ ಹಿಂದೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಎಲ್ಲೆಲ್ಲಿ ಭೂಕುಸಿತ ಸಂಭವಿಸಿತ್ತು ಅಲ್ಲೆಲ್ಲ ಪರಿಶೀಲನೆ ನಡೆಸುವಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ಡಿಸಿ ಮೀನಾ ನಾಗರಾಜ್‌ ಸಭೆ ನಡೆಸಿದ್ದು, ಸಲಹೆ ಸೂಚನೆಗಳನ್ನು ನೀಡಿದ್ದಾರೆ.  ಜೊತೆಗೆ ಎಸ್ಪಿ ವಿಕ್ರಂ ಅಮ್ಟೆ ಸೇರಿದಂತೆ ಅಧಿಕಾರಿಗಳು ಚಾರ್ಮಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Tags:
error: Content is protected !!