ಚಿಕ್ಕಮಗಳೂರು : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿನ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ ಕೆಲವೇ ದಿನಗಳಲ್ಲಿ ಇದೀಗ ಚಿಕ್ಕಮಗಳೂರು ಜಿಲ್ಲೆ ಮೂಡಿಗೆಡೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿಯೂ ಭೂಕುಸಿತದ ಆತಂಕ ಎದುರಾಗಿದೆ.
ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿರುವ ಕಾರಣ ಚಾರ್ಮಾಡಿ ಘಾಟಿನಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, ಜಿಲ್ಲಾಡಳಿತ ಕಟ್ಟೆಚ್ಚರ ಘೋಷಿಸಿದೆ. ಮುನ್ನೆಚ್ಚರಿಕಾ ಕಾರ್ಯಕ್ರಮವಾಗಿ ಈ ಹಿಂದೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಎಲ್ಲೆಲ್ಲಿ ಭೂಕುಸಿತ ಸಂಭವಿಸಿತ್ತು ಅಲ್ಲೆಲ್ಲ ಪರಿಶೀಲನೆ ನಡೆಸುವಂತೆ ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ಡಿಸಿ ಮೀನಾ ನಾಗರಾಜ್ ಸಭೆ ನಡೆಸಿದ್ದು, ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಜೊತೆಗೆ ಎಸ್ಪಿ ವಿಕ್ರಂ ಅಮ್ಟೆ ಸೇರಿದಂತೆ ಅಧಿಕಾರಿಗಳು ಚಾರ್ಮಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…