ಕೋಲಾರ: ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ಫಲಾನುಭವಿಗಳಿಗೆ ಒಟ್ಟಿಗೆ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಈ ಬಗ್ಗೆ ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಮಾರಾಟ ಮಾಡಲು ಒಪ್ಪಿಕೊಂಡಿದೆ. ಆದ್ದರಿಂದ ಕರ್ನಾಟಕವು ಪ್ರತಿ ಕೆಜಿಗೆ 22.5ರೂ ಪಾವತಿಸುತ್ತದೆ. ಸಾಗಣೆ ವೆಚ್ಚ ಪ್ರತಿ ಕೆಜಿಗೆ 2.50 ರೂ ಖರ್ಚು ತಲುಪುತ್ತದೆ. ಹೀಗಾಗಿ ಪ್ರತಿ ಕೆಜಿ ಅಕ್ಕಿಗೆ ರಾಜ್ಯಕ್ಕೆ 25 ರೂ ವೆಚ್ಚವಾಗುತ್ತದೆ. ಈ ಯೋಜನೆಯಡಿ ಪ್ರತಿ ತಿಂಗಳು 2.10 ಲಕ್ಷ ಟನ್ ಅಕ್ಕಿ ಅಗತ್ಯವಿದೆ ಎಂದು ಹೇಳಿದರು. ಇದರಿಂದ ಸುಮಾರು 4 ಕೋಟಿ ಜನರಿಗೆ ಪ್ರಯೋಜನ ಆಗಲಿದೆ ಎಂದು ತಿಳಿಸಿದರು.





