ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ. ಇದು ಈಗಾಗಲೇ ಆರ್ಥಿಕ ಒತ್ತಡದಲ್ಲಿರುವ ಮಧ್ಯಮ ವರ್ಗದ ಪೋಷಕರಿಗೆ ದೊಡ್ಡ ಹೊಡೆತವಾಗಿದೆ.
ಈಗಾಗಲೇ ಶಾಲಾ ಪ್ರವೇಶದ ವಯೋಮಿತಿ ನಿಯಮದ ಗೊಂದಲದಿಂದ ಸಂಕಷ್ಟದಲ್ಲಿರುವ ಪೋಷಕರಿಗೆ, ಇದೀಗ ಖಾಸಗಿ ಶಾಲೆಗಳು ಶುಲ್ಕ ಏರಿಕೆ ಮಾಡಿ ಮತ್ತಷ್ಟು ತಲೆನೋವು ತಂದಿವೆ. ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಯನ್ನು ಕೆಲವು ಖಾಸಗಿ ಶಾಲೆಗಳು ಆರಂಭಿಸಿವೆ. ಇದೇ ಸಂದರ್ಭದಲ್ಲಿ ಹಲವು ಶಾಲೆಗಳು 5ರಿಂದ 15 ಶೇಕಡಾ ವರೆಗೆ ಶುಲ್ಕ ಹೆಚ್ಚಿಸಲು ಮುಂದಾಗಿವೆ ಎಂಬ ಆರೋಪ ಪೋಷಕರ ವಲಯದಲ್ಲಿ ಕೇಳಿಬರುತ್ತಿದೆ. ಇದರಿಂದ ಈಗಾಗಲೇ ಆರ್ಥಿಕ ಒತ್ತಡದಲ್ಲಿರುವ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ, ಈ ವರ್ಷ ಸರ್ಕಾರ ಶಾಲಾ ಪ್ರವೇಶಕ್ಕೆ ಕೇವಲ 60 ದಿನಗಳ ವಯೋಮಿತಿ ಸಡಿಲಿಕೆ ನೀಡಿರುವುದು ಕೂಡ ಪೋಷಕರಿಗೆ ಮತ್ತೊಂದು ಸಮಸ್ಯೆಯಾಗಿದೆ. ಕಳೆದ ವರ್ಷ ಇದ್ದಂತೆ 5.5 ವರ್ಷದ ವಯೋಮಿತಿಯನ್ನು ಮುಂದುವರಿಸಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ. ಇಲ್ಲವಾದರೆ ಮಕ್ಕಳನ್ನು ಮತ್ತೆ ಯುಕೆಜಿ ತರಗತಿಯನ್ನು ಪುನರಾವರ್ತನೆ ಮಾಡಿಸಬೇಕಾಗಿ ಬರುತ್ತದೆ. ಇದರಿಂದ ಲಕ್ಷಾಂತರ ರೂಪಾಯಿ ಶುಲ್ಕವನ್ನು ಮತ್ತೊಮ್ಮೆ ಕಟ್ಟಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ಪೋಷಕರು ಹೇಳುತ್ತಿದ್ದಾರೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…