ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಕಳೆದ ತಡರಾತ್ರಿಯಿಂದಲೂ ಭಾರೀ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇಂದು ಕೂಡ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 100 ಮಿ.ಮೀಗೂ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 48 ಗಂಟೆಗಳಲ್ಲಿ ಹವಾಮಾನವು ತೀವ್ರವಾಗಿ ಬದಲಾಗುವ ನಿರೀಕ್ಷೆಯಿದ್ದು, ಚಂಡಮಾರುತ ಬುಧವಾರದವರೆಗೂ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಸೂಚನೆ ನೀಡಲಾಗಿದೆ.
ಇನ್ನು ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆಯಾಯ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ಮಳೆ ಮುಂದುವರಿದರೆ ನಾಳೆಯೂ ಕೂಡ ರಜೆ ನೀಡುವ ಎಲ್ಲಾ ಸಾಧ್ಯತೆಗಳು ಇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…