ರಾಜ್ಯ

ಕಲೆಕ್ಷನ್‍ನಲ್ಲೂ ಸಿಎಂ, ಡಿಸಿಎಂ ನಡುವೆ ತೀವ್ರ ಸ್ಪರ್ಧೆ: ಡಿ.ವಿ.ಸದಾನಂದಗೌಡ

ಬೆಂಗಳೂರು : ಕಲೆಕ್ಷನ್‍ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್‍ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. ದೆಹಲಿ ಕಲೆಕ್ಷನ್ ಕೇಂದ್ರ ಬಿಂದು. ರಾಹುಲ್ ಗಾಂಧಿ ಇದರ ಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಆರೋಪಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ‘ಎಟಿಎಂ ಸrfkArd ಕಲೆಕ್ಷನ್ ಟ್ರೀ’ ಸಂಬಂಧ ಪೋಸ್ಟರ್ ಬಿಡುಗಡೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಲೆಕ್ಷನ್ ಸರಕಾರವಿದೆ. ಅದನ್ನು ಸಾಮಾನ್ಯ ಜನರೂ ತಿಳಿದುಕೊಂಡು ಅದನ್ನು ಅನುಭವಿಸುವಂತಾಗಿದೆ. ಅಭಿವೃದ್ಧಿ ಇಲ್ಲದೆ, ರಸ್ತೆಯ ಹೊಂಡ ಗುಂಡಿಗಳನ್ನೂ ತುಂಬಿಸಲಾಗದ ದುಸ್ಥಿತಿ ರಾಜ್ಯದ್ದು ಎಂದು ಟೀಕಿಸಿದರು.

ರಾಷ್ಟ್ರೀಯ ಕಾಂಗ್ರೆಸ್ಸಿನ ಕಲೆಕ್ಷನ್ ನೇತೃತ್ವವನ್ನು ಸುರ್ಜೇವಾಲಾ, ವೇಣುಗೋಪಾಲ್ ವಹಿಸಿದ್ದಾರೆ. ಲೂಟಿ ಹೊಡೆಯುವ ಕಾರ್ಯಯೋಜನೆ ಅಚ್ಚರಿ ತರುವಂತಿದೆ. ಸಿದ್ದರಾಮಯ್ಯರ ಹಣ ಸಂಗ್ರಹ ಅವರ ಮಗ ಯತೀಂದ್ರ ಮತ್ತು ಸ್ವಜಾತಿಯ ಬೈರತಿ ಸುರೇಶ್ ಮೂಲಕ ನಡೆಯುತ್ತದೆ ಎಂದು ವಿವರಿಸಿದರು.

ಗುತ್ತಿಗೆದಾರರಲ್ಲೂ 2 ಗುಂಪುಗಳಾಗಿವೆ. ಕೆಂಪಣ್ಣ, ಸಿದ್ದರಾಮಯ್ಯರ ಗುಂಪು. ಇನ್ನೊಂದೆಡೆ ತಂಡ ದೊಡ್ಡದಿದೆ. ಉಪಾಧ್ಯಕ್ಷ ಅಂಬಿಕಾಪತಿ ನೇತೃತ್ವದ ತಂಡವಿದು. ಅವರ ಮನೆಯಲ್ಲೇ ಹಣ ಸಿಕ್ಕಿದೆ. ಪ್ರದೀಪ್, ಪ್ರಹ್ಲಾದ್, ಪ್ರಮೋದ್ ನೇತೃತ್ವದಲ್ಲಿ ಹಣ ಸಂಗ್ರಹ ನಡೆದಿದೆ. ಇವೆಲ್ಲವೂ ರಾಹುಲ್ ಗಾಂಧಿಯವರಿಗೆ ಹೋಗುತ್ತದೆ ಎಂದು ಆರೋಪಿಸಿದರು.

ಐಟಿ ಇಲಾಖೆಯಿಂದ ಮಾತ್ರ ಇದರ ತನಿಖೆ ನಡೆದರೆ ಸಾಲದು. ಇದರ ಬೇರು ಆಳವಾಗಿದೆ. ಕ್ರಿಮಿನಲ್ ಉದ್ದೇಶವನ್ನು ಹೊರಕ್ಕೆ ತರಲು ಸಿಬಿಐ ತನಿಖೆ ಅನಿವಾರ್ಯ. ಇದು ಖಜಾನೆ ಲೂಟಿಯ ವ್ಯವಸ್ಥೆಯಾಗಿದ್ದು, ಇದನ್ನು ಸಿದ್ದರಾಮಯ್ಯನವರು ಸಿಬಿಐ ತನಿಖೆಗೆ ಕೊಡಬೇಕು ಎಂದು ಆಗ್ರಹಿಸಿದರು.

ಬಿಲ್ ಕೊಡದೆ ಹಾವೇರಿ ಮತ್ತಿತರ ಕಡೆ ಇಂದಿರಾ ಕ್ಯಾಂಟೀನ್ ಬಂದ್ ಆಗಿದೆ. ಹಣ ಪಾವತಿ ಇಲ್ಲ; ಕಮಿಷನ್ ಕೇಳುತ್ತಾರೆಂದು ಆರೋಪ ಕೇಳಿಸಿದೆ. ಕಲಾವಿದರ ಕೈಯಲ್ಲಿ ಕಮಿಷನ್ ಕೇಳುವುದಕ್ಕಿಂತ ಕೆಟ್ಟ ಕೆಲಸ ಇನ್ನೇನಿದೆ ಎಂದು ಪ್ರಶ್ನಿಸಿದರು. ಐಟಿ ರೇಡ್ ಆದೊಡನೆ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಬೆಂಗಳೂರಿಗೆ ಓಡಿ ಬರುವ ದಯನೀಯ ಪರಿಸ್ಥಿತಿ ಯಾಕೆ ಬಂತು ಎಂದು ಅವರು ಪ್ರಶ್ನಿಸಿದರು.

ಎಲ್ಲ ಇಲಾಖೆಗಳಲ್ಲಿ ಕಿಂಗ್‍ಪಿನ್ ನೇಮಕ ಆಗಿದೆ. ಅಪಘಾತಗಳು ಹೆಚ್ಚಾಗಿವೆ. ಅಭಿವೃದ್ಧಿ ಕೆಲಸಗಳು ಆರಂಭವಾಗಬೇಕಿದೆ. ಹೈಕೋರ್ಟ್ ಆದೇಶದ ಬಳಿಕ ಡಿಸಿಎಂಗೆ ಆ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು. ಸಿಎಂ ಮತ್ತು ಎಐಸಿಸಿ ವರಿಷ್ಠರು ಅವರನ್ನು ಆ ಸ್ಥಾನದಿಂದ ಕೆಳಕ್ಕಿಳಿಸಿ ಸಮರ್ಪಕ ತನಿಖೆಗೆ ಅವಕಾಶ ಮಾಡಿಕೊಡಲಿ ಎಂದು ಅವರು ಒತ್ತಾಯಿಸಿದರು.

ರಾಜ್ಯದ ಎಲ್ಲ ಕಡೆ ಭ್ರಷ್ಟಾಚಾರ ಪರಿಚಯಿಸುವ ಪೋಸ್ಟರ್ ಅಂಟಿಸುವ ಕಾರ್ಯ ನಡೆಯಲಿದೆ. ಇದು ಸಿನಿಮಾ ಪ್ರಾರಂಭದ ಟ್ರೈಲರ್ ಅಷ್ಟೇ ಎಂದು ಸದಾನಂದಗೌಡ ತಿಳಿಸಿದರು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಶಾಸಕ ರವಿ ಸುಬ್ರಹ್ಮಣ್ಯ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ  ಉಪಸ್ಥಿತರಿದ್ದರು.

andolanait

Recent Posts

TESLA | ಶೀಘ್ರದಲ್ಲೇ ಬೆಂಗಳೂರಿಗೆ ಟೆಸ್ಲಾ ಶೋ ರೂಂ!

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ…

4 hours ago

ಚಲನಚಿತ್ರ ಪ್ರಮಾಣೀಕರಣದಲ್ಲಿ ಪಾರದರ್ಶಕತೆ ಇರಲಿ : ನಟ ಕಮಲ್ ಹಾಸನ್ ಸಲಹೆ

ಚೆನ್ನೈ : ತಮಿಳ್ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಸಂಬಂಧಿಸಿದ…

4 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಸ್ಚಚ್ಛತಾ ಅಭಿಯಾನ : 410 ಕೆ.ಜಿ ಕಸ ಸಂಗ್ರಹ

ಮೈಸೂರು : ಸ್ವಚ್ಛ ನಗರಿ ಮೈಸೂರಿನ ರಮಣೀಯ ಸ್ಥಳವಾದ ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗಾಗಿ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ಭಾಗವಾಗಿ ಮೈಸೂರು…

5 hours ago

ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ : ಎಚ್‌ಡಿಕೆ ಲೇವಡಿ

ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ…

6 hours ago

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ

ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…

6 hours ago

ಸ್ಪಾಮ್‌ ಕರೆಗಳ ಕಾಟವೇ? TRAI DND ಅಥವಾ 1909ಗೆ ಕರೆಮಾಡಿ

ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…

6 hours ago