ಬೆಂಗಳೂರು: ದಕ್ಷಿಣ ಭಾರತದಲ್ಲಿ ಮುಂಗಾರು ಅಬ್ಬರು ಜೋರಾಗಿದ್ದು, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಕೇರಳ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ವರುಣನ ಆರ್ಭಟ ಜೋರಾಗಿದೆ.
ರಾಜ್ಯದ ಹಲವು ನದಿಗಳು ಬಹುತೇಕ ತುಂಬಿ ಹರಿಯುತ್ತಿದ್ದು, ಅಪಾಯಮಟ್ಟಿ ಮೀರಿ ಹರಿಯುತ್ತಿದೆ. ಇನ್ನು ಮಹಾರಾಷ್ಟ್ರ, ಗೋವಾ ಕರ್ನಾಟಕ ಗಡಿ ಭಾಗದಲ್ಲಿನ ಹಲವು ಜಲಪಾತಗಳು ತುಂಬಿ ಹರಿಯುತ್ತಿವೆ.
ಕರ್ನಾಟಕ ಗೋವಾ ಗಡಿಗಳಲ್ಲಿ ಹೆಚ್ಚಿನ ಝರಿ, ಜಲಪಾತಗಳು ಕಂಡುಬರುತ್ತವೆ. ಮತ್ತು ಮುಂಗಾರಿನಲ್ಲಿ ಈ ಜಲಪಾತಗಳು ಮೈದುಂಬಿ ಹರಿಯುವ ರಮಣೀಯ ದೃಶ್ಯವನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಚಾರಣಕ್ಕೆ ತೆರಳುತ್ತಾರೆ. ಇದೇ ರೀತಿಯಲ್ಲಿ ಗೋವಾ, ಕರ್ನಾಟಕ ಗಡಿಯಲ್ಲಿರುವ ಪಾಲಿ ಜಲಪಾತ ಹುಕ್ಕಿ ಹರಿಯುತ್ತಿದ್ದು, ಪ್ರವಾಹದ ಸ್ಥಿತಿ ಉಂಟಾಗಿದೆ.
ಇನ್ನು ವೀಕೆಂಡ್‌ನಲ್ಲಿ ಮೋಜು ಮಸ್ತಿಗಾಗಿ ಚಾರಣಕ್ಕೆ ತೆರಳುವವರ ಸಂಖ್ಯೆ ಹೆಚ್ಚಾಗಿದೆ. ಇದರ ಬೆನ್ನಲ್ಲೇ ಪಾಲಿ ಜಲಪಾತ ವೀಕ್ಷಣೆಗಾಗಿ ರಾಜ್ಯದಿಂದ ಕನಿಷ್ಠ 50 ಮಂದಿ ತೆರಳಿದ್ದು, ಪ್ರವಾಹದಲ್ಲಿ ಸಿಲುಕಿದ್ದಾರೆ. ಇದರ ಜೊತೆಗೆ ಮಹಾರಾಷ್ಟ್ರ ಹಾಗೂ ಗೋವಾ ಸೇರಿದಂತೆ 150ಕ್ಕೂ ಹೆಚ್ಚುಮಂದಿ ಪ್ರವಾಹಲ್ಲಿ ಸಿಲುಕಿದ್ದು, ಅರಣ್ಯ ಇಲಾಖೆ ,ಅಗ್ನಿಶಾಮಕ ಸಿಬ್ಬಂದಿ ಈ ಎಲ್ಲಾ ಪ್ರವಾಸಿಗರನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ. ಕರ್ನಾಟಕದಿಂದ ಚಾರಣಕ್ಕೆ ತೆರಳಿದ್ದ 50 ಮಂದಿ ಸುರಕ್ಷಿತವಾಗಿ ವಾಪಸಾಗಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…