ರಾಜ್ಯ

ಮತೀಯ ಶಕ್ತಿಗಳ ವಿರುದ್ಧ ಹೋರಾಟ ಅಗತ್ಯ ; ಸಚಿವೆ ಹೆಬ್ಬಾಳಕರ್

ಯುವ ಕಾಂಗ್ರೆಸ್‌ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸಚಿವರ ಕರೆ

ಬೆಂಗಳೂರು: ದೇಶದಲ್ಲಿ ಆಳುತ್ತಿರುವ ಪಕ್ಷವು ಯುವ ಶಕ್ತಿಯನ್ನು ದುರ್ಬಲಗೊಳಿಸುತ್ತಿದ್ದು, ಮತೀಯ ವಿಚಾರಗಳನ್ನು ಮುಂದಿಟ್ಟು ಯುವ ಜನರ ಮನಸ್ಸನ್ನು ಕಲುಷಿತಗೊಳಿಸುತ್ತಿರುವ ಬಗ್ಗೆ ಯುವ ಕಾಂಗ್ರೆಸ್‌ ಕಾರ್ಯಕರ್ತರು ಎಚ್ಚರ ವಹಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕರೆ ನೀಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಕರ್ನಾಟಕ ಯುವ ಕಾಂಗ್ರೆಸ್‌ ಸಮಿತಿ ವತಿಯಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ದೇಶದಲ್ಲಿ ಆಳುತ್ತಿರುವ ಬಿಜೆಪಿ ಸರ್ಕಾರ ಯುವ ಜನರ ವಿರೋಧಿಯಾಗಿ ಕೆಲಸ ಮಾಡುತ್ತಿದೆ ಎಂದರು.

ಕೇಂದ್ರ ಸರ್ಕಾರದ ವಿರುದ್ಧ ಕಿಡಿ

ದೇಶದಲ್ಲಿ ನಿರುದ್ಯೋಗ, ಬಡತನ ಹೆಚ್ಚುತ್ತಿದೆ. ಬೆಲೆ ಏರಿಕೆ ಕಾರಣದಿಂದ ಬಡವರು, ಮಧ್ಯಮ ವರ್ಗದವರು ಹೈರಾಣಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಜನರಲ್ಲಿ ದ್ವೇಷ, ಅಸೂಯೆಯನ್ನು ಅಳಿಸಿ ಪ್ರೀತಿಯ ಭಾರತವನ್ನು ಪುನರ್ ನಿರ್ಮಾಣ ಮಾಡಬೇಕಿದೆ. ಇದಕ್ಕೆ ಯುವ ಜನರು ಕೈಜೋಡಿಸಬೇಕು ಎಂದು ಸಚಿವರು ಹೇಳಿದರು.

ಇಂದು ಯುವಕರ ಮುಂದೆ ಬಹಳಷ್ಟು ಸವಾಲುಗಳಿವೆ. ಮುಖ್ಯವಾಗಿ ನಿರುದ್ಯೋಗ ಸಮಸ್ಯೆ. ಕೇಂದ್ರದಲ್ಲಿ ಇರುವ ಸರ್ಕಾರ ವರ್ಷಕ್ಕೆ 2 ಕೋಟಿ ಉದ್ಯೋಗವನ್ನು ಸೃಷ್ಟಿ ಮಾಡುತ್ತೇವೆಂದು ಹೇಳಿ, ನಂತರ ನೀವು ಬೊಂಡ, ಬಜ್ಜಿಯನ್ನು ಮಾರಿ ಎಂದು ಯುವಜನರನ್ನು ವಂಚಿಸಿದರೆಂದು ಸಚಿವರು ಹರಿಹಾಯ್ದರು.

ಯುವಜನರಿಗೆ ಕಾಂಗ್ರೆಸ್‌ ಸರ್ಕಾರದಿಂದ ನಿರಾಸೆಯಾಗದು
ರಾಜ್ಯದಲ್ಲಿ ಆಡಳಿತದಲ್ಲಿ ಇರುವಂತಹ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯುವಕರಿಗೆ, ಪದವೀಧರರಿಗೆ ನಿರಾಸೆಯನ್ನು ಮಾಡಬಾರದೆಂದು ʼಯುವ ನಿಧಿʼ ಎಂಬ ಉತ್ತಮ ಯೋಜನೆಯನ್ನು ರೂಪಿಸಿದೆ. ರಾಜ್ಯದ ಜನತೆಗೆ ಕೊಟ್ಟಂತಹ ಭರವಸೆಗಳನ್ನು ಈಡೇರಿಸಿಕೊಂಡು ಮುನ್ನಡೆಯುತ್ತಿದೆ ಎಂದು ಹೇಳಿದರು.

ದೇಶದ ಯುವಕರೆಂದರೆ ಭರವಸೆ. ಯುವಕರೆಂದರೆ ದೇಶದ ಶಕ್ತಿ. ಯುವಕರನ್ನು ಮೇಲೆತ್ತುವ ನಿಟ್ಟಿನಲ್ಲಿ ರಾಜ್ಯದ ಕಾಂಗ್ರೆಸ್‌ ಸರ್ಕಾರ ಆಡಳಿತ ನಡೆಸುತ್ತಿದೆ. ಯುವ ಕಾಂಗ್ರೆಸ್‌ ಸೇರಿದಂತೆ ಪಕ್ಷದ ಎಲ್ಲ ಕಾರ್ಯಕರ್ತರ ಶ್ರಮದ ಫಲವಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರ ನಡೆಸುತ್ತಿದೆ ಎಂದು ತಿಳಿಸಿದರು.

ದೇಶ ಸದೃಢಗೊಳಿಸಲು ಸಲಹೆ
ಯುವಜನರ ಪ್ರೇರಣಾ ಶಕ್ತಿಯಾದ ಸ್ವಾಮಿ ವಿವೇಕಾನಂದರು ಒಂದೆಡೆ ಹೇಳುತ್ತಾರೆ. ಸಮಯ ಪ್ರಜ್ಞೆ ಮತ್ತು ಜವಾಬ್ದಾರಿಯಿಂದ ಯಾವಾಗ ಕೆಲಸ ಮಾಡುತ್ತಾರೋ, ಸಾಮಾಜಿಕ ಕಾಳಜಿ, ಕಳಕಳಿ ಮತ್ತು ಮನೆಯನ್ನು ಮುಂದೆ ನಡೆಸುವಂತ ಜವಾಬ್ದಾರಿಯನ್ನು ಯಾವಾಗ ತೆಗೆದುಕೊಳ್ಳುತ್ತಾರೋ ಅಂದು ಈ ದೇಶ ಸದೃಢವಾಗಿ ಬೆಳೆಯುತ್ತದೆ ಎಂದರು.

ಕಾಂಗ್ರೆಸ್ ಪಕ್ಷ ಯುವಕರಿಗೆ, ಮಹಿಳೆಯರಿಗೆ ಹೆಚ್ಚೆಚ್ಚು ಅವಕಾಶಗಳನ್ನು ನೀಡುತ್ತ ಬಂದಿದೆ. ಎಲ್ಲರನ್ನೂ ಸಮಾನವಾಗಿ ಕಾಣುವುದು ನಮ್ಮ ಪಕ್ಷದ ಮೊದಲ ಧ್ಯೇಯವಾಗಿದೆ. ಯುವ ಕಾಂಗ್ರೆಸ್‌ ಕಾರ್ಯಕರ್ತರು ಸದೃಢ ಸಮಾಜ ಕಟ್ಟಬೇಕಿದೆ. ಮುಂದೆ ರಾಜ್ಯದಲ್ಲಿ 2028ಕ್ಕೆ ಮತ್ತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಹೋರಾಡಬೇಕು ಎಂದು ಸಚಿವರು ಹೇಳಿದರು.

ಮತೀಯ ಶಕ್ತಿಗಳ ಮೇಲೆ ನಿಗಾ
ಬಿಜೆಪಿ, ಆರ್‌ ಎಸ್‌ ಎಸ್‌, ಎಬಿವಿಪಿ, ಇವೆಲ್ಲದರ ಬಗ್ಗೆ ಯುವ ಕಾಂಗ್ರೆಸ್‌ ಕಾಯರ್ಕರ್ತರು ಅತ್ಯಂತ ನಿಗಾ ವಹಿಸಬೇಕಿದೆ. ನಗರ, ಹಳ್ಳಿಗಳೆನ್ನದೆ ಎಲ್ಲ ಕಡೆಗಳಲ್ಲೂ ಬಹಳ ಸೂಕ್ಷ್ಮವಾಗಿ ಮತೀಯ ಶಕ್ತಿಗಳ ಮೇಲೆ ಕಣ್ಣು ಇಡಬೇಕಾಗಿದೆ. ಹೆಚ್ಚು ಸಾಮಾಜಿಕ ಜಾಲತಾಣಗಳ ಮೂಲಕ ಪಕ್ಷದ ಕಾರ್ಯಕ್ರಮಗಳು, ಯೋಜನೆಗಳನ್ನು ಯುವ ಕಾಂಗ್ರೆಸ್‌ ಕಾರ್ಯಕರ್ತರು ಜನತೆಗೆ ತಿಳಿಸಬೇಕೆಂದು ಕಿವಿಮಾತು ಹೇಳಿದರು.

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಸಂತೋಷ್ ಲಾಡ್ ವಿಧಾನ‌ ಪರಿಷತ್ ಸದಸ್ಯರಾದ ಎಸ್.ರವಿ, ಬಸನಗೌಡ ಬಾದರ್ಲಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು, ಹಿರಿಯ ಮುಖಂಡರಾದ ಬಿ.ಎಲ್.ಶಂಕರ್, ವಿನಯ್ ಕುಮಾರ್ ಸೊರಕೆ, ವಿ.ಆರ್.ಸುದರ್ಶನ್, ಯುವ‌ ಮುಖಂಡರಾದ ಮೃಣಾಲ್ ಹೆಬ್ಬಾಳಕರ್, ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಬಿ.ವಿ.ಶ್ರೀನಿವಾಸ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago