ಬೆಂಗಳೂರು: ನದಿ ಜೋಡಣೆ, ನೀರಾವರಿ ಸೇರಿದಂತೆ ರಾಜ್ಯದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೋರಾಡುವಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸುಮ್ಮನೆ ಕುಳಿತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆ ಡಿಪಿಆರ್ ಸಿದ್ಧಪಡಿಸಿದಾಗ, ಕರ್ನಾಟಕಕ್ಕೆ ನೀರು ಹಂಚಿಕೆ ಮಾಡಿರಲಿಲ್ಲ. ನಾನು 2020-22ರಲ್ಲಿ ಅಂದಿನ ಕೇಂದ್ರ ನೀರಾವರಿ ಸಚಿವರಿಗೆ ಪತ್ರ ಬರೆದಿದ್ದೆ ಎಂದರು.
ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಸಚಿವರ ಬಳಿ ಹೇಳಿದ ನಂತರ ರಾಜ್ಯಕ್ಕೆ 15.91 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದಾರೆ. ಆದರೆ ಅದನ್ನು ಘಟಪ್ರಭಾ ನದಿಗೆ ಹರಿಸುತ್ತೇವೆ ಎಂದಿದ್ದಾರೆ. ಇದು ಸಾಧ್ಯವಿಲ್ಲ ಎಂದು ನಾನು ಸಂಸತ್ತಿನಲ್ಲೇ ಪ್ರಶ್ನೆ ಮಾಡಿದ್ದೇನೆ ಎಂದರು.
ಗೋದಾವರಿಯಿಂದ ಹರಿಸಿದ ನೀರು ರಾಜ್ಯದಲ್ಲಿ ಕಾವೇರಿಗೆ ಎಲ್ಲಿ ಜೋಡಿಸುತ್ತಾರೆ ಎಂಬುದನ್ನು ಸ್ಪಷ್ಟವಾಗಿ ತೋರಿಸಿಯೇ ಇಲ್ಲ. ಅದನ್ನು ಸ್ಪಷ್ಟಪಡಿಸಿ ಎಂದು ಕೋರಿದ್ದೇನೆ. ಇದಕ್ಕೆ ಒತ್ತು ನೀಡಿ ಪ್ರಧಾನಿಗೆ ಪತ್ರ ಬರೆಯುತ್ತೇನೆ ಎಂದರು.
ಈ ಹೋರಾಟ ಮಾಡುವಲ್ಲಿ ಸಿದ್ದರಾಮಯ್ಯ, ಡಿಕೆಶಿ, ಕಾಂಗ್ರೆಸ್ ಸಂಸದರ ಜೊತೆಗೆ ಮಾತನಾಡಲು ನನಗೆ ಯಾವುದೇ ಸಮಸ್ಯೆ ಇಲ್ಲ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋರಾಟ ನಡೆಸುತ್ತೇನೆ ಎಂದು ಹೇಳಿದರು.
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…
ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…
ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…
ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…