ರಾಜ್ಯ

ಗೋದಾವರಿ-ಕಾವೇರಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ: ಎಚ್.ಡಿ.ದೇವೇಗೌಡ

ಬೆಂಗಳೂರು: ನದಿ ಜೋಡಣೆ, ನೀರಾವರಿ ಸೇರಿದಂತೆ ರಾಜ್ಯದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೋರಾಡುವಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಸುಮ್ಮನೆ ಕುಳಿತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆ ಡಿಪಿಆರ್‌ ಸಿದ್ಧಪಡಿಸಿದಾಗ, ಕರ್ನಾಟಕಕ್ಕೆ ನೀರು ಹಂಚಿಕೆ ಮಾಡಿರಲಿಲ್ಲ. ನಾನು 2020-22ರಲ್ಲಿ ಅಂದಿನ ಕೇಂದ್ರ ನೀರಾವರಿ ಸಚಿವರಿಗೆ ಪತ್ರ ಬರೆದಿದ್ದೆ ಎಂದರು.

ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಸಚಿವರ ಬಳಿ ಹೇಳಿದ ನಂತರ ರಾಜ್ಯಕ್ಕೆ 15.91 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿದ್ದಾರೆ. ಆದರೆ ಅದನ್ನು ಘಟಪ್ರಭಾ ನದಿಗೆ ಹರಿಸುತ್ತೇವೆ ಎಂದಿದ್ದಾರೆ. ಇದು ಸಾಧ್ಯವಿಲ್ಲ ಎಂದು ನಾನು ಸಂಸತ್ತಿನಲ್ಲೇ ಪ್ರಶ್ನೆ ಮಾಡಿದ್ದೇನೆ ಎಂದರು.

ಗೋದಾವರಿಯಿಂದ ಹರಿಸಿದ ನೀರು ರಾಜ್ಯದಲ್ಲಿ ಕಾವೇರಿಗೆ ಎಲ್ಲಿ ಜೋಡಿಸುತ್ತಾರೆ ಎಂಬುದನ್ನು ಸ್ಪಷ್ಟವಾಗಿ ತೋರಿಸಿಯೇ ಇಲ್ಲ. ಅದನ್ನು ಸ್ಪಷ್ಟಪಡಿಸಿ ಎಂದು ಕೋರಿದ್ದೇನೆ. ಇದಕ್ಕೆ ಒತ್ತು ನೀಡಿ ಪ್ರಧಾನಿಗೆ ಪತ್ರ ಬರೆಯುತ್ತೇನೆ ಎಂದರು.

ಈ ಹೋರಾಟ ಮಾಡುವಲ್ಲಿ ಸಿದ್ದರಾಮಯ್ಯ, ಡಿಕೆಶಿ, ಕಾಂಗ್ರೆಸ್‌ ಸಂಸದರ ಜೊತೆಗೆ ಮಾತನಾಡಲು ನನಗೆ ಯಾವುದೇ ಸಮಸ್ಯೆ ಇಲ್ಲ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋರಾಟ ನಡೆಸುತ್ತೇನೆ ಎಂದು ಹೇಳಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಂಬೂಸವಾರಿಯಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

4 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

16 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago