ರಾಜ್ಯ

ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ : ರಘುನಾಥ್‌ ಚ.ಹ, ಪ್ರಕಾಶ್‌ರಾಜ್‌ ಕೃತಿ ಆಯ್ಕೆ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಗಳನ್ನು ಪ್ರಕಟಿಸಿದೆ.

2020ನೇ ವರ್ಷದ ಚಲನಚಿತ್ರ ಸಾಹಿತ್ಯ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆ ಸಿರಿಗೇರಿಯ ಅನ್ನಪೂರ್ಣ ಪ್ರಕಾಶನ ಪ್ರಕಟಿಸಿದ ಹಿರಿಯ ಪತ್ರಕರ್ತ ರಘುನಾಥ ಚ.ಹ.ಅವರು ಆಯ್ದ 20 ಸಿನಿಮಾಗಳ ಕುರಿತು ಬರೆದ ಲೇಖನಗಳ ಸಂಗ್ರಹ ನಮೋ ವೆಂಕಟೇಶ ಕೃತಿ ಆಯ್ಕೆಯಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿದ್ದ ಹಿರಿಯ ಪತ್ರರ್ತರಾದ ಡಾ.ರಾಜಶೇಖರ ಹತಗುಂದಿ ಹಾಗೂ ಬಸವರಾಜ ಮೇಗಲಕೇರಿ ಅವರು 2020 ವರ್ಷದ ಕೃತಿಯನ್ನು ಆಯ್ಕೆ ಮಾಡಿದ್ದರು.

2021ನೇ ವರ್ಷದ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಗೆ ಬೆಂಗಳೂರಿನ ಸಿರಿಗಂಧ ಪ್ರಕಾಶನ ಪ್ರಕಟಿಸಿರುವ ಲೇಖಕ ಹಾಗೂ ಚಲನಚಿತ್ರ ನಿರ್ದೇಶಕ ಪ್ರಕಾಶರಾಜ್ ಮೇಹು ಅವರು ಬರೆದ ಡಾ.ರಾಜಕುಮಾರ್ ಬದುಕಿನ ಕುರಿತ ಅಂತರಂಗದ ಅಣ್ಣ ಕೃತಿಯು ಆಯ್ಕೆಯಾಗಿದೆ. ಸಾಹಿತಿ ಡಾ.ಚಿದಾನಂದ ಸಾಲಿ ಹಾಗೂ ಪತ್ರಕರ್ತ ಡಾ.ಶರಣು ಹುಲ್ಲೂರು ಅವರು ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.

ಪ್ರಶಸ್ತಿಯು ಲೇಖಕರು ಹಾಗೂ ಪ್ರಕಾಶಕರಿಬ್ಬರಿಗೂ ತಲಾ 20 ಸಾವಿರ ನಗದು ಹಾಗೂ 50 ಗ್ರಾಂ ಬೆಳ್ಳಿ ಪದಕಗಳನ್ನು ಒಳಗೊಂಡಿದೆ ಎಂದು ಎಂದು ವಾರ್ತಾ ಇಲಾಖೆ ಜಂಟಿ ನಿರ್ದೇಶಕ , ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಮಂಜುನಾಥ ಡೊಳ್ಳಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

6 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

9 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

9 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

10 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

10 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

10 hours ago