ರಾಜ್ಯ

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ : ಜಯಮಾಲಾಗೆ ಜಯ

ಬೆಂಗಳೂರು : ಕನ್ನಡ ಚಿತ್ರರಂಗದ ಮಾತೃ ಸಂಸ್ಥೆಯಾಗಿ ಪ್ರಸಿದ್ಧವಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಟಿ ಮತ್ತು ಮಾಜಿ ಸಚಿವೆ ಡಾ.ಜಯಮಾಲಾ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಂದು (ಜನವರಿ 31) ನಡೆದ ಚುನಾವಣೆಯಲ್ಲಿ ಅವರು ತಮ್ಮ ಪ್ರತಿಸ್ಪರ್ಧಿಗಳನ್ನು ಸುಲಭವಾಗಿ ಸೋಲಿಸಿ ಮತ್ತೊಮ್ಮೆ ಗದ್ದುಗೆ ಏರಿದ್ದಾರೆ.

ಗುರುರಾಜ ಕಲ್ಯಾಣ ಮಂಟಪದಲ್ಲಿ ನಡೆದ ಈ ಚುನಾವಣೆಯಲ್ಲಿ ಮತದಾನ ಮತ್ತು ಮತ ಎಣಿಕೆಯ ನಂತರ ಸಂಜೆಯೇ ಫಲಿತಾಂಶ ಪ್ರಕಟವಾಗಿದ್ದು, ಜಯಮಾಲಾ ಅವರು ಸ್ಪಷ್ಟ ಬಹುಮತದೊಂದಿಗೆ ಗೆದ್ದು ಬೀಗಿದ್ದಾರೆ.

ಈ ಬಾರಿ ನಿರ್ಮಾಪಕರ ವಲಯಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಜಯಮಾಲಾ ಅವರೊಂದಿಗೆ ಭಾ.ಮಾ.ಹರೀಶ್, ಶಾಸಕ ಮುನಿರತ್ನ ಮತ್ತು ಚಿಂಗಾರಿ ಮಹಾದೇವ್ ಸೇರಿದಂತೆ ಹಲವರು ಸ್ಪರ್ಧಿಸಿದ್ದರು. ಆದರೆ ಮುನಿರತ್ನ ಮತ್ತು ಚಿಂಗಾರಿ ಮಹಾದೇವ್ ಅವರು ನಾಮಪತ್ರ ವಾಪಸ್ ಪಡೆದ ನಂತರ ಪೈಪೋಟಿ ಜಯಮಾಲಾ vs ಭಾ.ಮಾ.ಹರೀಶ್ ನಡುವೆ ಮಾತ್ರ ಸೀಮಿತವಾಗಿತ್ತು. ಚುನಾವಣೆಯಲ್ಲಿ ರಾಜಕೀಯ ಬಣಗಳ ಪ್ರಭಾವವೂ ಗಮನಾರ್ಹವಾಗಿತ್ತು – ಜಯಮಾಲಾ ಅವರಿಗೆ ಸಿದ್ದರಾಮಯ್ಯ ಬಣದ ಬೆಂಬಲವಿದ್ದರೆ, ಹರೀಶ್ ಅವರಿಗೆ ಡಿ.ಕೆ. ಶಿವಕುಮಾರ್ ನೈತಿಕ ಬೆಂಬಲ ಇತ್ತು ಎಂದು ಮೂಲಗಳು ತಿಳಿಸಿವೆ.

ಜಯಮಾಲಾ ಅವರು ಈ ಹಿಂದೆಯೂ 2008ರಿಂದ 2010ರವರೆಗೆ KFCC ಅಧ್ಯಕ್ಷರಾಗಿದ್ದರು ಮತ್ತು ಮಹಿಳಾ ಅಧ್ಯಕ್ಷರಾಗಿ ಇತಿಹಾಸ ಸೃಷ್ಟಿಸಿದ್ದರು. ಈ ಬಾರಿ ಮತ್ತೊಮ್ಮೆ ಗೆದ್ದ ಅವರು, ಕನ್ನಡ ಚಿತ್ರರಂಗದ ಸಮಸ್ಯೆಗಳಾದ ಸಬ್ಸಿಡಿ ಬಿಡುಗಡೆ, ಒಟಿಟಿ ನಿಯಂತ್ರಣ, ಚಿತ್ರನಗರಿ ಅಭಿವೃದ್ಧಿ ಮತ್ತು ನಿರ್ಮಾಪಕರ-ಪ್ರದರ್ಶಕರ ಸಮನ್ವಯಕ್ಕೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಚುನಾವಣೆಯ ನಂತರ ಮಾತನಾಡಿದ ಜಯಮಾಲಾ ಅವರು, “ಇಡೀ ಕನ್ನಡ ಚಿತ್ರರಂಗದ ಬೆಳವಣಿಗೆಗಾಗಿ ಕೆಲಸ ಮಾಡುತ್ತೇನೆ. ಎಲ್ಲರ ಬೆಂಬಲಕ್ಕೆ ಧನ್ಯವಾದಗಳು” ಎಂದು ಹೇಳಿದರು. ಈ ಗೆಲುವು ಕನ್ನಡ ಚಿತ್ರರಂಗದಲ್ಲಿ ಹೊಸ ಆಶಾವಾದ ಮೂಡಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

4 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

4 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

5 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

6 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

8 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

10 hours ago