ರಾಜ್ಯ

SSLC,PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ 1 ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಅಧಿಕೃತವಾಗಿ ಪ್ರಕಟಿಸಿದೆ ವೇಳಾಪಟ್ಟಿಯ ಪ್ರಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 23ರಿಂದ ಏಪ್ರಿಲ್ ೨ರವರೆಗೆ ನಡೆಯುಲಿದ್ದು, ಇನ್ನು ಪಿಯುಸಿ ಪರೀಕ್ಷೆ-೧ರ ಪರೀಕ್ಷೆಗಳು 2026 ರ ಫೆಬ್ರವರಿ ೨೮ರಿಂದ ಮಾರ್ಚ್ 17ರ ವರೆಗೆ ನಡೆಯಲಿ. ಹಾಗೆ ಪಿಯುಸಿ ಪರೀಕ್ಷೆ-೨ ಏಪ್ರಿಲ್ 25ರಿಂದ ಮೇ೯ರವರೆಗೂ ನಡೆಯಲಿವೆ.

2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-೧ ಮತ್ತು ಪರೀಕ್ಷೆ-೨ ರ ಅಂತಿಮ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ (ನೋಟಿಸ್ ಬೋರ್ಡ್ ) ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ ಪರೀಕ್ಷಾ ಮಂಡಳಿ ತಿಳಿಸಿದೆ.

ಇದನ್ನು ಓದಿ: ಗೇಟ್ ಪರೀಕ್ಷೆ ಒಂದು; ಅವಕಾಶಗಳು ಹಲವು

ಎಸ್‌ಎಸ್‌ಎಲ್‌ಸಿ ವೇಳಾಪಟ್ಟಿ
ಮಾರ್ಚ್ 18 (ಪ್ರಥಮ ಭಾಷೆ)- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ
ಮಾರ್ಚ್ 23- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ
ಮಾರ್ಚ್ 25 (ದ್ವಿತೀಯ ಭಾಷೆ) ಇಂಗ್ಲಿಷ್, ಕನ್ನಡ
ಮಾರ್ಚ್ 28 ಗಣಿತ, ಸಮಾಜಶಾಸ್ತ್ರ
ಮಾರ್ಚ್ 30(ತೃತೀಯ ಭಾಷೆ) ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ
ಏಪ್ರಿಲ್ 01 ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರ್, ಎಲಿಮೆಂಟ್ಸ್ ಆಫ್ ಮೆಕ್ಯಾನಕಲ್ ಇಂಜಿನಿಯರ್,
ಏಪ್ರಿಲ್ 2- ಸಮಾಜ ವಿಜ್ಞಾನ

ಪಿಯುಸಿ ಪರೀಕ್ಷೆ 1
28-2-2026- ಕನ್ನಡ, ಅರಬಿಕ್
2-3-26-ಭೂಗೋಳಶಾಸ್ತ್ರ, ಮನಶಾಸ್ತ್ರ, ಸಂಖ್ಯಾಶಾಸ್ತ್ರ
3-3-26- ಇಂಗ್ಲಿಷ್
4-3-26- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
5 -3-26- ಇತಿಹಾಸ
6-3-26-ಭೌತಶಾಸ್ತ್ರ
7-3-26-ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
9-3-26- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ
10-3-26- ಅರ್ಥಶಾಸ್ತ್ರ
11-3-26- ತರ್ಕಶಾಸ, ವಿದ್ಯುನ್ಮಾನ ಶಾಸ್ತ್ರ, ಗೃಹವಿಜ್ಞಾನ
12-3-26-ಹಿಂದಿ
13-3-26-ರಾಜ್ಯಶಾಸ್ತ್ರ
14-3-26- ಲೆಕ್ಕಶಾಸ್ತ್ರ, ಗಣಿತ
16-3-26- ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕವಿಜ್ಞಾನ
17-3-26- ಹಿಂದೂಸ್ಥಾನಿ ಸಂಗೀತ, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಅಂಡ್ ವೆಲ್‌ನೆಸ್

ಪಿಯುಸಿ ಪರೀಕ್ಷೆ 2
ಏಪ್ರಿಲ್ 25-2026: ಕನ್ನಡ, ಅರಬಿಕ್
ಏಪ್ರಿಲ್ 27-2026: ಐಚ್ಚಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ, ಜೀವಶಾಸ್ತ್ರ
ಏಪ್ರಿಲ್ 28-2026: ರಾಜ್ಯಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಏಪ್ರಿಲ್ 29: ಗಣಿತ, ಗೃಹ ಗಣಿತ, ಮೂಲ ವಿಜ್ಞಾನ
ಏಪ್ರಿಲ್ 30: ಅರ್ಥಶಾಸ್ತ್ರ
ಮೇ 2: ಇತಿಹಾಸ, ರಸಾಯನಶಾಸ್ತ್ರ
ಮೇ 4: ಇಂಗ್ಲಿಷ್
ಮೇ 5: ಹಿಂದಿ
ಮೇ 6: ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ
ಮೇ 7: ಸಮಾಜ ಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 8: ಮನಶಾಸ್ತ್ರ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ
ಮೇ 9: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

4 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

4 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

4 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

4 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

4 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago