ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ್ದ ರಾಜ್ಯ ಸರ್ಕಾರಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ.
ಬಿಜೆಪಿ ರಾಜ್ಯ ಘಟಕದ ಮಾಧ್ಯಮ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ನೀರಿನ ಸಮಸ್ಯೆ ವಿಚಾರ ಪ್ರಸ್ತಾಪಿಸಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗದುಕೊಂಡರು. ನನ್ನ ತೆರಿಗೆ ನನ್ನ ಹಕ್ಕು ಘೋಷಣೆ ಸರಿ ಇದೆ. ಬೆಂಗಳೂರಿನ ಜನ ಇದೇ ಮಾತು ಕೇಳಿದ್ರೆ ಏನು ಹೇಳ್ತೀರಾ? ಬೆಂಗಳೂರು ಅಭಿವೃದ್ಧಿ ಆಗಬೇಕು. ನನ್ನ ತೆರಿಗೆ ನನಗೆ ಕೊಡಿ ಅಂದರೆ ಏನು ಹೇಳ್ತಿರಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಕರ್ನಾಟಕದ ಬರ ಪರಿಹಾರ ಅನುದಾನ ಬಿಡುಗಡೆ ವಿಳಂಬಕ್ಕೆ ಕೇಂದ್ರ ಸರ್ಕಾರ ಕಾರಣವಲ್ಲ. ಉನ್ನತಾಧಿಕಾರಿ ಸಮಿತಿ ಸಭೆ ನಡೆಸಲು ಕೇಂದ್ರ ಚುನಾವಣಾ ಆಯೋಗದ ಅನುಮತಿ ಬಾರದಿರುವುದರಿಂದ ವಿಳಂಬಕ್ಕೆ ಕಾರಣವಾಗಿದೆ. ಕರ್ನಾಟಕ ಮಾತ್ರವಲ್ಲ, ತೆಲಂಗಾಣ, ತಮಿಳುನಾಡು, ಸಿಕ್ಕಿಂ, ಮಿಜೋರಾಂ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಿಗೆ ವಿಪತ್ತು ಪರಿಹಾರ ನಿಧಿಯಡಿ ನೆರವು ನೀಡುವ ಪ್ರಸ್ತಾವನೆಗಳಿಗೆ ಉನ್ನತಾಧಿಕಾರಿ ಸಮಿತಿ ಮುಂದಿವೆ. ಚುನಾವಣೆ ಆಯೋಗದ ಅನುಮತಿ ದೊರಕಿದ ಬಳಿಕವೇ ನೀರ್ಮಾನ ಕೈಗೊಳ್ಳಬೇಕಿದೆ ಎಂದು ಹೇಳಿದರು.
ತೆರಿಗೆ ವಿಚಾರದಲ್ಲಿ ಬಹಿರಂಗ ಚರ್ಚೆಗೆ ನಿಮಗೆ ಆಹ್ವಾನವಿದೆಯಲ್ಲಾ? ಎಂಬ ಪ್ರಶ್ನೆಗೆ ಉತ್ತರಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನಿರಾಕರಿಸಿದರು.
ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…
ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…
ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…
ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್ ಸಿಎಂ ಸಿದ್ದರಾಮಯ್ಯ…
ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್…
ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…