guarantee yojane
ಬೆಂಗಳೂರು: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಗ್ಯಾರಂಟಿ ಜಾರಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಬರೋಬ್ಬರಿ 7.65 ಕೋಟಿ ಹಣ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ.
ಜಿಲ್ಲಾ ಪಂಚಾಯಿತಿಗಳಿಗೆ 1.31 ಕೋಟಿ ರೂ, ತಾಲ್ಲೂಕು ಪಂಚಾಯಿತಿಗಳಿಗೆ 6.33 ಕೋಟಿ ರೂ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರ ಗೌರವಧನ ಮತ್ತು ಸದಸ್ಯರ ಸಭಾ ಭತ್ಯೆಯನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದ್ದು, ಮೂರು ತಿಂಗಳ ಅಡ್ವಾನ್ಸ್ ಹಣ ಬಿಡುಗಡೆ ಮಾಡಲು ಸೂಚನೆ ನೀಡಿದೆ.
ಸರ್ಕಾರ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನೇ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿದೆ. ಈ ವಿಚಾರದ ಬಗ್ಗೆ ಕಳೆದ ಅಧಿವೇಶನದಲ್ಲಿ ಸರ್ಕಾರ ಹಾಗೂ ವಿಪಕ್ಷಗಳ ಮಧ್ಯೆ ಭಾರೀ ಜಟಾಪಟಿ ನಡೆದಿತ್ತು. ಈ ಬೆನ್ನಲ್ಲೇ ಜಿ.ಪಂ, ತಾಪಂ.ಗಳಿಗೆ 7.65 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ ಆದೇಶಿಸಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…