ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಓಲ್ಡ್ ಏರ್‌ಪೋರ್ಟ್ ರಸ್ತೆಯ ಕಮಾಂಡೋ ಆಸ್ಪತ್ರೆಯ ಸಿಗ್ನಲ್ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.
ಸಿಗ್ನಲ್‌ನಲ್ಲಿ ನಿಂತಿದ್ದ ಕಾರ್‌ಗಳಿಗೆ ಹಿಂಬದಿಯಿಂದ ನಟ ಮಯೂರ್ ಪಟೇಲ್ ಚಾಲನೆ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಒಂದಕ್ಕೊಂದು ಕಾರ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದ, ಎರಡು ಸ್ವಿಫ್ಟ್ ಡಿಸೈನ್ ಕಾರುಗಳು, ಒಂದು ಸರ್ಕಾರಿ ವಾಹನ ಜಖಂಗೊಂಡಿದೆ.
ಡ್ರಿಂಕ್ ಅಂಡ್ ಡ್ರೈವ್ ಪರೀಕ್ಷೆ ನಡೆಸಲಾಗಿದ್ದು, ಮಯೂರ್ ಪಟೇಲ್ ಮದ್ಯಪಾನ ಮಾಡಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮಯೂರ್ ಪಟೇಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.




