Mysore
25
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್:‌ ಮಧ್ಯಂತರ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಈ ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್.‌22ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿದ ಆರೋಪದಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ನಾಯಕ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಈಗ ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

 

 

 

Tags:
error: Content is protected !!