Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ: ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು

ವಿಜಯಪುರ: ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್‌ ಅಹಮದ್‌ ಖಾನ್‌ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ವಿಜಯಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಮಹಾನಗರ ಪಾಲಿಕೆ ಸದಸ್ಯ ಪರಶುರಾಮ ಎಂಬುವವರು, ಶಾಸಕ ಯತ್ನಾಳ್‌ ವಿರುದ್ಧ ದೂರು ದಾಖಲಿಸಿದ್ದಾರೆ.

ವಿಜಯಪುರ ನಗರದಲ್ಲಿ ಇತ್ತೀಚೆಗೆ ನಡೆದ ವಕ್ಫ್‌ ವಿರುದ್ಧದ ಪ್ರತಿಭಟನೆಯೊಂದರಲ್ಲಿ ಶಾಸಕ ಯತ್ನಾಳ್‌, ಕೇಂದ್ರ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದಾರೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದೆಲ್ಲದರ ನಡುವೆ ಮುಸ್ಲಿಂ ಧರ್ಮದ ವಿರುದ್ಧವೂ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಶಾಸಕ ಯತ್ನಾಳ್‌ ಹೇಳಿಕೆಗಳಿಂದ ನಗರದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟಾಗಿದ್ದು, ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಶಾಸಕ ಯತ್ನಾಳ್‌ ಹಾಗೂ ವೇದಿಕೆಯಲ್ಲಿದ್ದ ಬಿಜೆಪಿ ಮುಖಂಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ

Tags: