ವಿಜಯಪುರ: ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರ ಮಹಾನಗರ ಪಾಲಿಕೆ ಸದಸ್ಯ ಪರಶುರಾಮ ಎಂಬುವವರು, ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲಿಸಿದ್ದಾರೆ.
ವಿಜಯಪುರ ನಗರದಲ್ಲಿ ಇತ್ತೀಚೆಗೆ ನಡೆದ ವಕ್ಫ್ ವಿರುದ್ಧದ ಪ್ರತಿಭಟನೆಯೊಂದರಲ್ಲಿ ಶಾಸಕ ಯತ್ನಾಳ್, ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಏಕವಚನದಲ್ಲಿ ಮಾತನಾಡಿದ್ದಾರೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದೆಲ್ಲದರ ನಡುವೆ ಮುಸ್ಲಿಂ ಧರ್ಮದ ವಿರುದ್ಧವೂ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಶಾಸಕ ಯತ್ನಾಳ್ ಹೇಳಿಕೆಗಳಿಂದ ನಗರದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟಾಗಿದ್ದು, ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಶಾಸಕ ಯತ್ನಾಳ್ ಹಾಗೂ ವೇದಿಕೆಯಲ್ಲಿದ್ದ ಬಿಜೆಪಿ ಮುಖಂಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…