ಬೀದರ್: 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿ ಸಂಜು ಸುಗುರೆ ಎಂಬುವವರು ದೂರು ನೀಡಿದ್ದಾರೆ.
ಕಳೆದ 2023ರ ಚುನಾವಣೆ ಸಂದರ್ಭದಲ್ಲಿ ಉದ್ಯಮಿ ಸಂಜು ಸುಗುರೆಯಿಂದ ಶಾಸಕ ಸಲಗರ್ ಅವರು ಚುನಾವಣೆ ವೆಚ್ಚಕ್ಕೆಂದು 99 ಲಕ್ಷ ರೂ ಸಾಲ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಹಣ ವಾಪಸ್ ಕೊಡಿ ಎಂದು ಮನೆಗೆ ಹೋದರೆ ಅವಾಚ್ಯ ಶಬ್ಧಗಳಿಂದ ಬೈದು ಧಮ್ಕಿ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖ ಮಾಡಿದ್ದು, ಸೆಪ್ಟೆಂಬರ್.19ರಂದು ಶರಣು ಸಲಗರ್ ನೀಡಿದ ಚೆಕ್ ಬ್ಯಾಂಕಿಗೆ ಹಾಕಿದ್ರೆ ವಾಪಸ್ ಬಂದಿದೆ.
ಕರ್ನಾಟಕ ಬ್ಯಾಂಕ್‌ನಲ್ಲಿದ್ದ ಶಾಸಕರ ಖಾತೆ ಮುಚ್ಚಲ್ಪಟ್ಟಿದೆ ಎಂದು ಮಾಹಿತಿ ನೀಡಿದ್ದು, ಬಳಿಕ ಶಾಸಕರ ವಿರುದ್ಧ ಬೆಂಗಳೂರಿನ ಎಸಿಜೆಎಂ ಕೋರ್ಟ್‌ನಲ್ಲಿ ಸಂಜು ಸುಗುರೆ ದಾವೆ ಹೂಡಿದ್ದರು.
ಕೋರ್ಟ್ ಸೂಚನೆ ಮೇರೆಗೆ ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಸಕರ ವಿರುದ್ಧ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವ ಡಿಕ್ಕಿ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…
ಟರ್ಕಿ : ಟರ್ಕಿಯ ಕಹ್ರಮನ್ಮರಾಸ್ ಪ್ರಾಂತ್ಯದ ಶಾಲೆಯಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ತಂದೆಯ (ಮಾಜಿ ಪೊಲೀಸ್ ಅಧಿಕಾರಿ) ಬಂದೂಕನ್ನು…
ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ.…